Shivamogga education department / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಲೆಕ್ಕ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿದ್ಯಾನಗರ ನಿವಾಸಿ ಎಂ. ಸುಬ್ರಹ್ಮಣ್ಯ ಅವರು ಕಳೆದ ಭಾನುವಾರ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ವೀಣಾ, 2…
Shivamogga education department / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಲೆಕ್ಕ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿದ್ಯಾನಗರ ನಿವಾಸಿ ಎಂ. ಸುಬ್ರಹ್ಮಣ್ಯ ಅವರು ಕಳೆದ ಭಾನುವಾರ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ವೀಣಾ, 2 ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇವರ ಪತ್ನಿ ಅಯನೂರು ಕೋಟೆ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಶಿಕ್ಷಕರೊಂದಿಗೆ ಅತ್ಯಂತ ಉತ್ತಮವಾದ ಒಡನಾಟ ಹಾಗೂ ಬಾಂಧವ್ಯ ಹೊಂದಿದ್ದ ಎಂ. ಸುಬ್ರಹ್ಮಣ್ಯರ ನಿಧನವು ಇಲಾಖೆಯ ವಲಯದಲ್ಲಿ ದುಃಖ ತಂದಿದೆ.
ಸುಬ್ರಹ್ಮಣ್ಯ ಅವರ ನಿಧನಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ, ಧೈರ್ಯ ಮತ್ತು ಸಾಂತ್ವನವನ್ನು ಅವರ ಕುಟುಂಬದ ಸದಸ್ಯರು ಹಾಗೂ ಬಂಧು-ಮಿತ್ರರಿಗೆ ಭಗವಂತನು ಕರುಣಿಸಲಿ ಎಂದು ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಮಜುನಾಥ್, ಶಿವಮೊಗ್ಗ ಬಿಇಒ ರಮೇಶ್, ಶಿಕಾರಿಪುರ ಬಿಇಒ ಲೋಕೇಶ್ ಸೇರಿದಂತೆ ಶಿಕ್ಷಣ ಇಲಾಖೆಯ ಹಲವರು ಪ್ರಾರ್ಥಿಸಿದ್ದಾರೆ.
