Financial Aid / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಇತ್ತೀಚೆಗೆ ಮರಬಿದ್ದು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ಮಲೆನಾಡು ಟುಡೆ ವರದಿ ಮಾಡಿತ್ತು. ಈ ಘಟನೆಯಲ್ಲಿ ವಿದ್ಯಾರ್ಥಿನಿಯ ಕಾಲು ಮುರಿದ್ದಿದ್ದರಿಂದ ಆಕೆಗೆ ದೊಡ್ಡ ಮಟ್ಟದ ಚಿಕಿತ್ಸೆಯ ಅನಿವಾರ್ಯತೆ ಎದುರಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮೃತ ಸರಕಾರಿ ಪದವಿಪೂರ್ವ ಕಾಲೇಜಿನ…
Financial Aid / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಇತ್ತೀಚೆಗೆ ಮರಬಿದ್ದು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ಮಲೆನಾಡು ಟುಡೆ ವರದಿ ಮಾಡಿತ್ತು. ಈ ಘಟನೆಯಲ್ಲಿ ವಿದ್ಯಾರ್ಥಿನಿಯ ಕಾಲು ಮುರಿದ್ದಿದ್ದರಿಂದ ಆಕೆಗೆ ದೊಡ್ಡ ಮಟ್ಟದ ಚಿಕಿತ್ಸೆಯ ಅನಿವಾರ್ಯತೆ ಎದುರಾಗಿತ್ತು.
ಈ ನಿಟ್ಟಿನಲ್ಲಿ ಮಂಗಳೂರಿನ ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮೃತ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನೀಲಾವತಿಗೆ ಆಕೆಯ ಕಾಲೇಜು ನೆರವಾಗುತ್ತಿದೆ. ಕಾಲೇಜಿನ ಉಪನ್ಯಾಸಕರು, ಸಹಪಾಠಿಗಳು ಕಾಲೇಜಿನಲ್ಲಿ ದೇಣಿಗೆ ಸಂಗ್ರಹಿಸಿ ಮಂಗಳವಾರ ಪೋಷಕರಿಗೆ ನೀಡಿದರು.
ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲದಿರುವುದನ್ನು ಅರಿತ ಕಾಲೇಜಿನ ಸಿಡಿಸಿ ಸಮಿತಿ, ವಿದ್ಯಾರ್ಥಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಡಿಸಿ ಅಧ್ಯಕ್ಷರನ್ನೊಳ ಗೊಂಡ ತಂಡದವರು ಸುಮಾರು 32,600 ರೂ. ಗಳನ್ನು ಸಂಗ್ರಹಿಸಿ ಚಿಕಿತ್ಸೆಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬೆಳ್ಳೂರು ಗ್ರಾ.ಪಂ.ನ ಹಿರೇಸಾನಿ ಗ್ರಾಮದ ತಮ್ಮ ಮನೆಗೆ ಇತ್ತೀಚೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿತ್ತು.
