ಶಿಕ್ಷಕರ ವಿಚಾರದಲ್ಲಿ ಆಯುಕ್ತರನ್ನ ಭೇಟಿಯಾದ ಸಿಎಸ್ ಷಡಾಕ್ಷರಿ ನಿಯೋಗ! ವಿವರ ಇಲ್ಲಿದೆ

Published: 30 ಜುಲೈ 2026, 8:28 ಫೂರ್ವಾಹ್ನ • 1 min read
✨ AI ಓವರ್‌ವ್ಯೂ (ಮುಖ್ಯಾಂಶ)

Education Commissioner / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಇತ್ತೀಚೆಗಷ್ಟೆ ಶಿಕ್ಷಕರ ನಿಯೋಗ ತಮ್ಮ ಬೇಡಿಕೆಗಳನ್ನ ಮುಂದಿಟ್ಟುಕೊಂಡು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿಯನ್ನ ಭೇಟಿಯಾಗಿತ್ತು. ಇದರ ಬೆನ್ನಲ್ಲೆ ಸಿಎಸ್ ಷಡಾಕ್ಷರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕ ಹುದ್ದೆಗಳಿಗೆ ಬಡ್ತಿ ಕಲ್ಪಿಸುವ ವಿಚಾರ ಹಾಗೂ ಹಿಂದಿ ಭಾಷಾ ವಿಷಯದ ಶಿಕ್ಷಕರು ಎದುರಿಸುತ್ತಿರುವ…

Education Commissioner / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಇತ್ತೀಚೆಗಷ್ಟೆ ಶಿಕ್ಷಕರ ನಿಯೋಗ ತಮ್ಮ ಬೇಡಿಕೆಗಳನ್ನ ಮುಂದಿಟ್ಟುಕೊಂಡು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿಯನ್ನ ಭೇಟಿಯಾಗಿತ್ತು. ಇದರ ಬೆನ್ನಲ್ಲೆ ಸಿಎಸ್ ಷಡಾಕ್ಷರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕ ಹುದ್ದೆಗಳಿಗೆ ಬಡ್ತಿ ಕಲ್ಪಿಸುವ ವಿಚಾರ ಹಾಗೂ ಹಿಂದಿ ಭಾಷಾ ವಿಷಯದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮತ್ತು ರಾಜ್ಯ ಯೋಜನಾ ನಿರ್ದೇಶಕರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದೆ

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ನಿಯೋಗದಲ್ಲಿದ್ದರು ಹಾಗೂ ಇದೇ ಶಿಕ್ಷಕರ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವಂತೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಸಹ ಶಿಕ್ಷಕರ ನಿಯೋಗದ ಅಹವಾಲು ಆಲಿಸಿದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬದಂದಿದೆ. ಪ್ರೌಢಶಾಲಾ ಶಿಕ್ಷಕರಿಗೆ ಪದವಿಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈಗಾಗಲೇ ವಿಷಯವಾರು ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ಸಿದ್ಧಪಡಿಸಲಾಗಿದೆ ಅಂಥಾ ನಿಯೋಗಕ್ಕೆ ಆಯುಕ್ತರು ತಿಳಿಸಿದ್ದಾರೆ.

ಮೇಲಾಗಿ ಮುಂದಿನ 1 ಅಥವಾ 2 ದಿನಗಳ ಒಳಗಾಗಿ ಈ ಜೇಷ್ಠತಾ ಪಟ್ಟಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗುವುದು. ತದನಂತರ, ಅಧಿಕೃತವಾಗಿ ಈ ಪಟ್ಟಿಯನ್ನು ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಕಚೇರಿಗೆ ಹಸ್ತಾಂತರಿಸಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ.

END OF STORY

ajjimane ganesh

Senior Journalist | Malenadu Today
✓ Verified Journalist