ಯುವಕನಿಗೆ 10 ವರ್ಷ ಶಿಕ್ಷೆ 20 ಸಾವಿರ ದಂಡ, ಆತ ಮಾಡಿದ್ದೇನು ಗೊತ್ತಾ?

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜಾತಿ ನಿಂದನೆ ಮಾಡಿದ ಪ್ರಕರಣದ ಆರೋಪಿಗೆ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. 

ಗುರುಪೂರ್ಣಿಮೆ ವಿಶೇಷ: ಶಿವಮೊಗ್ಗದ ದುರ್ಗಿಗುಡಿ ರಾಯರ ಮಠದಲ್ಲಿ ವಿಶೇಷ ಪೂಜೆ!

Shivamogga ಘಟನೆಯ ವಿವರ

2023 ರಲ್ಲಿ ವಿನೋಬಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಮನೆಯೊಂದರಲ್ಲಿ ಮಹಿಳೆಯೊಬ್ಬರು ಒಬ್ಬರೇ ಇದ್ದರು. ಈ ಸಂದರ್ಭದಲ್ಲಿ 27 ವರ್ಷದ ಯುವಕನೊಬ್ಬ ಏಕಾಏಕಿ ಮನೆಯೊಳಗೆ ನುಗ್ಗಿದ್ದಾನೆ. ನಂತರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿದ್ದಾನೆ. ಅಷ್ಟೇ ಅಲ್ಲದೆ, ಈ ವಿಚಾರವನ್ನು ಎಲ್ಲಾದರೂ ಹೇಳಿದರೆ ಕೊಲ್ಲುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಾನೆ. 

ಈ ಹಿನ್ನೆಲೆಯಲ್ಲಿ ನೊಂದ ಮಹಿಳೆ ವಿನೋಬಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಡಿವೈಎಸ್‌ಪಿ ಸುರೇಶ್ ಎಂ. ಅವರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 20,000 ದಂಡ ವಿಧಿಸಿದ್ದಾರೆ. ಅಲ್ಲದೆ, ನೊಂದ ಮಹಿಳೆಗೆ 15,000 ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಪಿ.ಓ. ಪುಷ್ಪಾ ಅವರು ವಾದ ಮಂಡಿಸಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor