27 ಆನೆ ಕಾವಾಡಿ ಹುದ್ದೆಗಳಿಗೆ ನೇರ ನೇಮಕಾತಿ

Published: 01 ಆಗಷ್ಟ್ 2026, 8:32 ಫೂರ್ವಾಹ್ನ • 1 min read
✨ AI ಓವರ್‌ವ್ಯೂ (ಮುಖ್ಯಾಂಶ)

Elephant Mahout Recruitment 2026 / ಮಲೆನಾಡು ಟುಡೆ ಸುದ್ದಿ / ಮೈಸೂರು / ಅರಣ್ಯ ಇಲಾಖೆಯ ಮೈಸೂರು ವೃತ್ತದ ವ್ಯಾಪ್ತಿಯಲ್ಲಿ ಖಾಲಿ ಇರುವ ಆನೆ ಕಾವಾಡಿ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಆನೆ ಕಾವಾಡಿ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರವು ಈ…

Elephant Mahout Recruitment 2026 / ಮಲೆನಾಡು ಟುಡೆ ಸುದ್ದಿ / ಮೈಸೂರು / ಅರಣ್ಯ ಇಲಾಖೆಯ ಮೈಸೂರು ವೃತ್ತದ ವ್ಯಾಪ್ತಿಯಲ್ಲಿ ಖಾಲಿ ಇರುವ ಆನೆ ಕಾವಾಡಿ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಆನೆ ಕಾವಾಡಿ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರವು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಪತ್ರಿಕಾ ಪ್ರಕಟಣೆಯಲ್ಲಿರುವ ಖಚಿತ ಮಾಹಿತಿ ಪ್ರಕಾರ, ಒಟ್ಟು 27 ಆನೆ ಕಾವಾಡಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದರಲ್ಲಿ 26 ಹುದ್ದೆಗಳು ಹೊಸದಾಗಿದ್ದರೆ, 1 ಹುದ್ದೆ ಬ್ಯಾಕ್‌ಲಾಗ್ ಅಡಿ ಭರ್ತಿಯಾಗಲಿದೆ.

ಆಸಕ್ತ ಅಭ್ಯರ್ಥಿಗಳು ಆಗಸ್ಟ್ 5, 2026 ರಿಂದ ಸೆಪ್ಟೆಂಬರ್ 3, 2026 ರ ಸಂಜೆ 5:30 ರವರೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ www.kfdrecruitment.in ಗೆ ಭೇಟಿ ನೀಡುವಂತೆ ಹಾಗೂ ಕಚೇರಿಯಲ್ಲಿಯೂ ಮಾಹಿತಿ ಲಭ್ಯವಿರುತ್ತದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

END OF STORY

ajjimane ganesh

Senior Journalist | Malenadu Today
✓ Verified Journalist