Karnataka Bans Junk Food ಬೆಂಗಳೂರು : ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಶಾಲಾ-ಕಾಲೇಜುಗಳ ಆವರಣ ಮತ್ತು ಸುತ್ತಮುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಸ್ಪಷ್ಟಪಡಿಸಿದ್ದಾರೆ. ಗುರುಪೂರ್ಣಿಮೆ ವಿಶೇಷ: ಶಿವಮೊಗ್ಗದ ದುರ್ಗಿಗುಡಿ ರಾಯರ ಮಠದಲ್ಲಿ ವಿಶೇಷ…
Karnataka Bans Junk Food ಬೆಂಗಳೂರು : ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಶಾಲಾ-ಕಾಲೇಜುಗಳ ಆವರಣ ಮತ್ತು ಸುತ್ತಮುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಸ್ಪಷ್ಟಪಡಿಸಿದ್ದಾರೆ.
ಗುರುಪೂರ್ಣಿಮೆ ವಿಶೇಷ: ಶಿವಮೊಗ್ಗದ ದುರ್ಗಿಗುಡಿ ರಾಯರ ಮಠದಲ್ಲಿ ವಿಶೇಷ ಪೂಜೆ!
ಆರೋಗ್ಯಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕ ಕೊಬ್ಬು, ಅಧಿಕ ಸಕ್ಕರೆ ಹಾಗೂ ಅಧಿಕ ಉಪ್ಪು ಹೊಂದಿರುವ ಆಹಾರ ಪದಾರ್ಥಗಳು ಮತ್ತು ಪಾನೀಯಗಳು ಮಕ್ಕಳ ಆರೋಗ್ಯಕ್ಕೆ ಮಾರಕವಾಗಿವೆ. ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟದ ಹಾಗೂ ಆರೋಗ್ಯಕರ ಆಹಾರ ಲಭ್ಯತೆಯನ್ನು ಖಚಿತಪಡಿಸುವ ಉದ್ದೇಶದಿಂದ ಇಲಾಖೆಯು ಜುಲೈ ತಿಂಗಳು ರಾಜ್ಯದಾದ್ಯಂತ 134 ಶಾಲೆ-ಕಾಲೇಜುಗಳ ಆವರಣದಲ್ಲಿ ಪರಿಶೀಲನೆ ನಡೆಸಿದೆ. ಈ ವೇಳೆ ಸಂಶಯಾಸ್ಪದ 53 ಆಹಾರ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯದ ವಿಶ್ಲೇಷಣೆಗೆ ಕಳುಹಿಸಲಾಗಿದೆ’ ಎಂದು ಮಾಹಿತಿ ನೀಡಿದರು
ಶಾಲಾ-ಕಾಲೇಜು ಆವರಣದಲ್ಲಿ ನಿಯಮ ಮೀರಿ ಜಂಕ್ ಫುಡ್ ಮಾರಾಟ ಮಾಡಿದಲ್ಲಿ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ 3 ಲಕ್ಷ ರೂ. ವರೆಗೂ ದಂಡ ವಿಧಿಸಲು ಅವಕಾಶವಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶಾಲಾ ಆಡಳಿತ ಮಂಡಳಿಗಳಿಗೂ ಈ ಕುರಿತು ಅರಿವು ಮೂಡಿಸಲಾಗುವುದು ಎಂದು ಅವರು ತಿಳಿಸಿದರು.
ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಜಂಕ್ ಫುಡ್ ಮಾರಾಟ ತಡೆಯಲು ಎಚ್ಚರಿಕೆ ಫಲಕಗಳನ್ನು ಪ್ರದರ್ಶಿಸಬೇಕು. ಅಲ್ಲದೆ, ಶಾಲೆಗಳ ಸಮೀಪದಲ್ಲಿರುವ ಎಲ್ಲ ಆಹಾರ ಮಳಿಗೆಗಳು, ಹೊಟೇಲ್, ಬೇಕರಿ ಹಾಗೂ ಕ್ಯಾಂಟೀನ್‌ಗಳು ‘ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006’ರ ಅಡಿ ಕಡ್ಡಾಯವಾಗಿ ನೋಂದಣಿಯಾಗಿ, ಪರವಾನಗಿ ಪಡೆಯಬೇಕು. ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದುಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
