ಶಿವಮೊಗ್ಗ : ಮಳೆ ಆರ್ಭಟ, ತುಂಗಾ ಜಲಾಶಯದ ಒಳಹರಿವು ಹೊರಹರಿವು ಎಷ್ಟಿದೆ ಇವತ್ತು ?

ಹಂಚಿಕೊಳ್ಳಿ
WhatsApp Facebook X Telegram
Tunga Dam Shivamogga Tunga Dam
Tunga Dam Shivamogga Tunga Dam

Tunga Dam Outflow ಶಿವಮೊಗ್ಗ : ಮಲೆನಾಡಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ಪ್ರಸ್ತುತ ಗಾಜನೂರಿನ ತುಂಗಾ ಜಲಾಶಯಕ್ಕೆ ಬರೋಬ್ಬರಿ 86123 ಕ್ಯೂಸೆಕ್ ಹರಿದು ಬರುತ್ತಿದೆ. ಡ್ಯಾಂಗೆ ಅಪಾರ ಪ್ರಮಾಣದ  ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ ಬರೋಬ್ಬರಿ 89,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಒಳಹರಿವು ಹಾಗೂ ಹೊರಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿರುವುದು ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಸೃಷ್ಟಿಸಿದೆ. 

ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎ.ಎಚ್.ಸುನೀಲ್ ಅರ್ಜಿ

ಕಳೆದ ಒಂದು ವಾರದಿಂದ ಶೃಂಗೇರಿ ಹಾಗೂ ತೀರ್ಥಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಡುವಿಲ್ಲದೆ ಧಾರಾಕಾರ ಮಳೆಯಾಗುತ್ತಿದೆ. ವರುಣನ ಅಬ್ಬರ ತೀವ್ರಗೊಂಡಿರುವ ಕಾರಣ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಇಂದು ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ.

ತುಂಗಾ ನದಿಯು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಸಮೀಪ ಅಡಿಕೆ ತೋಟಗಳಿಗೆ ನದಿ ನೀರು ನುಗ್ಗಿದೆ. ನದಿಯ ಆರ್ಭಟ ಹೀಗೆಯೇ ಮುಂದುವರೆದರೆ ಮತ್ತೂರು ಮತ್ತು ಶಿವಮೊಗ್ಗ ನಡುವಿನ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಳ್ಳುವ ಸಾಧ್ಯತೆಯಿದೆ. ಇದರ ಜೊತೆಗೆ ಸಿದ್ದರಹಳ್ಳಿ, ಕುಸ್ಕೂರು ಮತ್ತು ಕಡೇಕಲ್ ಭಾಗಗಳಿಗೂ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.

ನದಿಯ ಪ್ರವಾಹದಿಂದಾಗಿ ನದಿ ತೀರದ ಕೃಷಿ ಭೂಮಿಗಳು ಹಾಗೂ ತೋಟಗಳು ಜಲಾವೃತಗೊಂಡು ಅಪಾರ ನಷ್ಟದ ಭೀತಿ ಎದುರಾಗಿದೆ. ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿರುವ ಕಾರಣ, ತುಂಗಾ ನದಿ ಪಾತ್ರದಲ್ಲಿ ವಾಸಿಸುವ ಸಾರ್ವಜನಿಕರು ಹಾಗೂ ರೈತರು ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ರವಾನಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor