SHIVAMOGGA NEWS TODAY

ಪೋಲಿಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ: ಕೆಇಎ ನೀಡಿರುವ ಸ್ಪಷ್ಟನೆ ಇಲ್ಲಿದೆ ನೋಡಿ

KEA Clarifies Shivamogga Court Verdict Hosanagara Police Thirthahalli Police Reservoir Water Shivamogga
KEA Clarifies Shivamogga Court Verdict Hosanagara Police Thirthahalli Police Reservoir Water Shivamogga
ಶೇರ್ ಮಾಡಿ WhatsApp Facebook X

KEA Clarifies ಶಿವಮೊಗ್ಗ : ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಹಲವು ಜಿಲ್ಲೆಗಳಲ್ಲಿ ಅವ್ಯವಸ್ಥೆಗಳ ಆರೋಪದ ನಡುವೆ ನಡೆದಿದೆ ಎಂಬ ವದಂತಿಗಳಿಗೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಕುರಿತು ಸ್ಪಷ್ಟನೆ ನೀಡಿದೆ.

ಶಿವಮೊಗ್ಗ :  ಗುಡ್ಡೇಕಲ್​​  ಜಾತ್ರೆಗೆ ಡೇಟ್​ ಫಿಕ್ಸ್​​ : ಯಾವಾಗ ?

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪರೀಕ್ಷೆಯ ಸಮಯದಲ್ಲಿ ವಿತರಿಸಲಾದ ಒಎಂಆರ್ ಶೀಟ್ ಹಾಗೂ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಗಳು ಒಂದೇ ಆಗಿಲ್ಲ ಎಂಬ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಡಿ ಅಭ್ಯರ್ಥಿಗಳಲ್ಲಿ ಗೊಂದಲ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಪ್ರಾಧಿಕಾರ, ಒಎಂಆರ್ ಶೀಟ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆ ಒಂದೇ ಇರಬೇಕು ಎಂದು ಯಾವುದೇ ಪ್ರಕಟಣೆ ಅಥವಾ ಸೂಚನೆಗಳಲ್ಲಿ ತಿಳಿಸಿಲ್ಲ ಎಂದು ಸ್ಪಷ್ಟಪಡಿಸಿದೆ.  

ಸಾಮಾನ್ಯ ನಿಯಮಗಳಂತೆ ಒಎಂಆರ್ ಉತ್ತರ ಪತ್ರಿಕೆಯಲ್ಲಿ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆ ಹಾಗೂ ಆವೃತ್ತಿ ಕೋಡ್ ಅನ್ನು ಅಭ್ಯರ್ಥಿಗಳೇ ಬರೆದು ಭರ್ತಿ ಮಾಡಲು ಅವಕಾಶ ನೀಡಲಾಗಿರುತ್ತದೆ. ಒಂದು ವೇಳೆ ಎರಡೂ ಸಂಖ್ಯೆಗಳು ಒಂದೇ ಆಗಿರಬೇಕಿದ್ದಲ್ಲಿ, ಒಎಂಆರ್‌ನಲ್ಲಿ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಯನ್ನು ಪ್ರತ್ಯೇಕವಾಗಿ ಬರೆಯುವ ಅಗತ್ಯವೇ ಇರುತ್ತಿರಲಿಲ್ಲ ಎಂದು ಕೆಇಎ ವಿವರಿಸಿದೆ. 

ಸಮಗ್ರ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗಿದ್ದು, ಅಭ್ಯರ್ಥಿಗಳನ್ನು ತಪ್ಪುದಾರಿಗೆ ಎಳೆಯಲು ಸಾಮಾಜಿಕ ಮಾಧ್ಯಮಗಳಲ್ಲಿ ಕಲ್ಪಿತ ವದಂತಿಗಳನ್ನು ಹರಡಲಾಗುತ್ತಿದೆ. ಆದ್ದರಿಂದ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಇಂತಹ ಆಧಾರರಹಿತ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಮನವಿ ಮಾಡಿದ್ದಾರೆ.

Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor