Boy Injured in Monkey Attack / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯ ಗ್ರಾಮವೊಂದರಲ್ಲಿ ಮುಸಿಯಾ ಹದಿನೈದು ವರ್ಷದ ಬಾಲಕನ ಮೇಲೆ ದಾಳಿ ಮಾಡಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಎರಗಿದ ಮುಸಿಯಾ ಆತನನ್ನು ಕಚ್ಚಿ ಗಾಯಗೊಳಿಸಿದೆ. ತಕ್ಷಣವೇ ಬಾಲಕನನ್ನು ಸ್ತಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನೂ ಈ ಬಗ್ಗೆ ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಬಾಲಕನ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದಾರೆ.
ಬಾಲಕನ ಮೇಲೆ ದಾಳಿ ಮಾಡಿರುವ ಮುಸಿಯಾ ಜಾತಿಯ ಕೋತಿಗೆ ಹುಚ್ಚು ಹಿಡಿದಿರುವ ಶಂಕೆ ಇದ್ದು, ಈ ಹಿಂದೆಯು ದಾಳಿ ಮಾಡಿದೆ ಅಂಥಾ ಸ್ಥಳೀಯರು ಹೇಳುತ್ತಿದ್ದಾರೆ. ಅಲ್ಲದೆ ಅದನ್ನು ಇದುವರೆಗೂ ಹಿಡಿಯಲು ಪ್ರಯತ್ನ ಮಾಡದಿರುವುದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಕಾರ್ಯಾಚರಣೆ ನಡೆಸಿ ಈ ಹುಚ್ಚು ಕೋತಿಯನ್ನು ಸೆರೆಹಿಡಿದು ಕಾಡಿಗೆ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.
