ಇಪಿಎಫ್ ಕಡ್ಡಾಯ ಮೂಲವೇತನ ಮಿತಿ 25,000 ರೂಪಾಯಿಗೆ ಹೆಚ್ಚಳ! ವಿಷಯ ವಿವರ ಓದಿ

ಹಂಚಿಕೊಳ್ಳಿ
WhatsApp Facebook X Telegram
ಮಾಹಿತಿಗಾಗಿ ಸಾಂದರ್ಭಿಕ ಎಐ ಚಿತ್ರ

EPF Wage Limit / ಮಲೆನಾಡು ಟುಡೆ ಸುದ್ದಿ / ನವದೆಹಲಿ / ನೌಕರರ ಭವಿಷ್ಯ ನಿಧಿ (ಇಪಿಎಫ್) ಹಾಗೂ ಪಿಂಚಣಿ ಯೋಜನೆಗಳ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಕೇಂದ್ರ ಹಣಕಾಸು ಸಚಿವಾಲಯವು ಪ್ರಮುಖ ನಿರ್ಧಾರವೊಂದನ್ನು ಕೈಗೊಂಡಿದೆ.

ಕಡ್ಡಾಯ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ಮೂಲವೇತನ ಮಿತಿಯನ್ನು ಪ್ರಸ್ತುತ ಇರುವ 15,000 ರೂ.ಗಳಿಂದ 25,000 ರೂ.ಗಳಿಗೆ ಹೆಚ್ಚಳ ಮಾಡಲು ಸಚಿವಾಲಯವು ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಈ ಹಿಂದೆ 2014ರ ಸೆಪ್ಟೆಂಬರ್ ತಿಂಗಳಿನಲ್ಲಿ ಕೊನೆಯ ಬಾರಿಗೆ ನೌಕರರ ವೇತನ ಮಿತಿಯನ್ನು ಪರಿಷ್ಕರಣೆ ಮಾಡಲಾಗಿತ್ತು. ಇದೀಗ ಸಿದ್ಧವಾಗಿರುವ ನೂತನ ಪ್ರಸ್ತಾವನೆಯು ಸಚಿವ ಸಂಪುಟದ ಅಂತಿಮ ಒಪ್ಪಿಗೆಗಾಗಿ ಕಾಯುತ್ತಿದೆ. ಮುಂಬರುವ ಹೊಸ ಹಣಕಾಸು ವರ್ಷದ ಆರಂಭದ ಒಳಗಾಗಿ ಈ ನೂತನ ನಿಯಮ ಜಾರಿಗೆ ಬರುವ ನಿರೀಕ್ಷೆಗಳಿವೆ ಎನ್ನಲಾಗಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor