S.Janaki ಶಿವಮೊಗ್ಗ: ರಾಗರಂಜಿನಿ ಟ್ರಸ್ಟ್ ವತಿಯಿಂದ ಆಗಸ್ಟ್ 07 ರಂದು ಕುವೆಂಪು ರಂಗಮಂದಿರದಲ್ಲಿ ಕಂಗಳು ವಂದನೆ ಹೇಳಿವೆ ಎಂಬ ಎಸ್. ಜಾನಕಿಯವರು ಹಾಡಿರುವ ಕನ್ನಡ ಚಲನಚಿತ್ರಗಳ ಗೀತಾ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ; 27 ವರ್ಷದ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ, ಸಂತ್ರಸ್ತೆಗೆ 2 ಲಕ್ಷ ಪರಿಹಾರ, ಏನಿದು ಸುದ್ದಿ
ಈ ಕುರಿತು ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ಪ್ರಮುಖರಾದ ಪ್ರಹ್ಲಾದ್ ದೀಕ್ಷಿತ್ ಮಾತನಾಡಿ, ರಾಗರಂಜಿನಿ ಟ್ರಸ್ಟ್ ಒಂದು ಸಾಂಸ್ಕೃತಿಕ ಸಂಸ್ಥೆಯಾಗಿದೆ. ಕಳೆದ 10 ವರ್ಷಗಳಿಂದ ವಿವಿಧ ಸಾಧಕರಿಗೆ ಗೌರವ ಸಮರ್ಪಿಸುವ ದೃಷ್ಟಿಯಿಂದ ಅನೇಕ ಸಂಗೀತ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದ್ದೇವೆ. ಅದರಂತೆ ಈ ಬಾರಿಯೂ ಖ್ಯಾತ ಹಿನ್ನೆಲೆ ಗಾಯಕಿಯಾದ ಎಸ್. ಜಾನಕಿಯವರಿಗೆ ವಂದನೆ ಸಲ್ಲಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು, ನಾನು ಮತ್ತು ನನ್ನ ಶಿಷ್ಯವೃಂದ ಈ ಕಾರ್ಯಕ್ರಮದಲ್ಲಿ ಹಾಡಲಿದ್ದೇವೆ ಎಂದರು.
ಸಂಜೆ 5:30 ಕ್ಕೆ ಆರಂಭವಾಗುವ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಸೇರಿದಂತೆ ಪ್ರಮುಖರು ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಗರಂಜಿನಿ ಟ್ರಸ್ಟ್‌ನ ಅಧ್ಯಕ್ಷರಾದ ಮಾನವೇಂದ್ರ ದೀಕ್ಷಿತ್ ವಹಿಸಲಿದ್ದಾರೆ.
