ಶಿವಮೊಗ್ಗ: ಆ. 10 ರಂದು ಶಿವಪ್ಪ ನಾಯಕ ವೃತ್ತದಲ್ಲಿ ಕಿಸಾನ್ ಮೋರ್ಚಾ ಬೃಹತ್ ರಸ್ತೆ ತಡೆ, ಕಾರಣವೇನು? 

ಹಂಚಿಕೊಳ್ಳಿ
WhatsApp Facebook X Telegram
SKM Aug 10 Protest
SKM Aug 10 Protest

SKM Aug 10 Protest ಶಿವಮೊಗ್ಗ :  ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಕಾರ್ಪೊರೇಟ್‌ಗಳು ದೇಶ ಬಿಟ್ಟು ತೊಲಗಲಿ ಎಂಬ ಮುಖ್ಯಾಂಶದೊಂದಿಗೆ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆಗಸ್ಟ್ 10 ರಂದು ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಸ್ತೆ ತಡೆ ಚಳವಳಿಯನ್ನು ಆಯೋಜಿಸಿದೆ. 

ಶಿವಮೊಗ್ಗ :  ಗುಡ್ಡೇಕಲ್​​  ಜಾತ್ರೆಗೆ ಡೇಟ್​ ಫಿಕ್ಸ್​​ : ಯಾವಾಗ ?

ನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಮಿತಿಯ ಪ್ರಮುಖ ನಾಯಕರು, ಐತಿಹಾಸಿಕ ಕ್ವಿಟ್ ಇಂಡಿಯಾ ಚಳವಳಿಯ ಸ್ಪೂರ್ತಿಯೊಂದಿಗೆ ದೇಶದ ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ಈ ಪ್ರತಿಭಟನೆ ನಡೆಯಲಿದೆ. ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದು, ಕಾರ್ಪೊರೇಟ್ ವಶಕ್ಕೆ ನೀಡುವುದು, ಕಾರ್ಮಿಕರ ಕೂಲಿ ಪರಿಷ್ಕರಣೆ ಮಾಡದಿರುವುದು ಹಾಗೂ ನೂತನವಾಗಿ ತರಲಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳು, ವಿದ್ಯುತ್ ತಿದ್ದುಪಡಿ ಕಾಯ್ದೆ 2025, ಬೀಜ ಕಾಯ್ದೆ ಮತ್ತು ಕೃಷಿ ಮಾರುಕಟ್ಟೆ ರಾಷ್ಟ್ರೀಯ ಧೋರಣಾ ಚೌಕಟ್ಟನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಗುವುದು ಎಂದು ತಿಳಿಸಿದರು. 

ಎಂ.ಎಸ್. ಸ್ವಾಮಿನಾಥನ್ ವರದಿಯ ಶಿಫಾರಸಿನಂತೆ ಎಲ್ಲಾ ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸುವುದು, ರೈತರು, ಕೃಷಿ ಕೂಲಿಕಾರರು ಹಾಗೂ ಮಹಿಳೆಯರ ಸಂಪೂರ್ಣ ಸಾಲ ಮನ್ನಾ ಮಾಡಿ ಋಣಮುಕ್ತ ಕಾಯ್ದೆ ಜಾರಿಗೊಳಿಸುವುದು ಈ ಪ್ರತಿಭಟನೆಯ ಪ್ರಮುಖ ಬೇಡಿಕೆಗಳಾಗಿವೆ. ಇದರೊಂದಿಗೆ, ಜೀವನಾಧಾರಿತ ಕನಿಷ್ಠ ಕೂಲಿ ನಿಗದಿಪಡಿಸುವುದು, ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವುದು ಮತ್ತು ಡೀಸೆಲ್ ಹಾಗೂ ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಲು ಒತ್ತಾಯಿಸಲಾಗುತ್ತದೆ. 

ಬ್ಯಾಂಕಿಂಗ್, ವಿಮೆ, ಶಿಕ್ಷಣ ಹಾಗೂ ಆರೋಗ್ಯ ರಂಗಗಳ ಖಾಸಗೀಕರಣವನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಮತ್ತು ರಾಜ್ಯದಲ್ಲಿ ಬರಗಾಲ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಬೇಕು. 2025-26ನೇ ಸಾಲಿನ ಬೆಳೆ ವಿಮೆ ಪರಿಹಾರ ಹಣವನ್ನು ಬಾಕಿ ಉಳಿಸದೆ ಕೂಡಲೇ ವಿತರಿಸಬೇಕು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ದೂರು ಪರಿಹಾರ ಕಚೇರಿಗಳನ್ನು ತೆರೆದು ಸಮಸ್ಯೆ ಬಗೆಹರಿಸಬೇಕು. ಎಂ.ಎಸ್.ಪಿ ಯೋಜನೆಯಡಿ ಖರೀದಿಸಿದ ಬೆಳೆಗಳಿಗೆ ತಕ್ಷಣವೇ ಹಣ ಪಾವತಿಸಬೇಕು ಹಾಗೂ ವಿಪತ್ತು ಪರಿಹಾರ ನಿಧಿಯನ್ನು 10 ಪಟ್ಟು ಹೆಚ್ಚಿಸಿ ಬೆಳೆ ಮತ್ತು ಜಾನುವಾರು ನಷ್ಟ ಅನುಭವಿಸಿದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮುಖಂಡರು ಸ್ಪಷ್ಟಪಡಿಸಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor