ಶಿವಮೊಗ್ಗ: ಸಿಗಂದೂರಿಗೆ ಹೊರಟಿದ್ದ ಕಾರು ಅಪಘಾತ – 6 ಜನ ಪ್ರಾಣಾಪಾಯದಿಂದ ಪಾರು

ಹಂಚಿಕೊಳ್ಳಿ
WhatsApp Facebook X Telegram
Shivamogga Crash 6 Saved as Car Flips
Shivamogga Crash 6 Saved as Car Flips

Shivamogga Crash ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಪ್ರವಾಸಿಗರಿದ್ದ ಕಾರು ಚೋರಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ನಡೆದಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಶಿವಮೊಗ್ಗ : ಮಧು ಬಂಗಾರಪ್ಪರಿಗೆ ಮತ್ತೊಮ್ಮೆ ಸಚಿವ ಸ್ಥಾನ: ನೂತನ ಸಚಿವರ ಪೈನಲ್​​ ಲೀಸ್ಟ್​​​ ಇಲ್ಲಿದೆ ನೋಡಿ

ಬೆಂಗಳೂರಿನಿಂದ ಆರು ಮಂದಿ ಸ್ನೇಹಿತರು ಕಾರಿನಲ್ಲಿ ಸಿಗಂದೂರಿಗೆ ಪ್ರಯಾಣಿಸುತ್ತಿದ್ದರು. ಶಿವಮೊಗ್ಗ ತಾಲೂಕಿನ ಚೋರಡಿ ಸೇತುವೆ ಸಮೀಪ ತಲುಪುತ್ತಿದ್ದಂತೆ ಚಾಲಕನ  ನಿಯಂತ್ರಣ ತಪ್ಪಿದ ವಾಹನವು ರಸ್ತೆ ಮಧ್ಯದ ತಡೆಗೋಡೆಗೆ ಡಿಕ್ಕಿಹೊಡೆದಿದೆ. ಡಿಕ್ಕಿಯ ಹೊಡೆತಕ್ಕೆ ಕಾರು ರಸ್ತೆಯಲ್ಲೇ ಮೂರು ಬಾರಿಗೆ ಮಗುಚಿ ಬಿದ್ದಿದ್ದು, ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅದೇ ಮಾರ್ಗದಲ್ಲಿ ಕರ್ತವ್ಯದ ನಿಮಿತ್ತ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ಸಾಗರ ಪೇಟೆ ಠಾಣೆಯ ಎಎಸ್‌ಐ ಮೀರಾಬಾಯಿ ಹಾಗೂ ಅವರ ಸಿಬ್ಬಂದಿ ತಕ್ಷಣವೇ ತಮ್ಮ ವಾಹನವನ್ನು ತಡೆದು, ಜಖಂಗೊಂಡಿದ್ದ ಕಾರಿನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಸಮಯಪ್ರಜ್ಞೆ ಮೆರೆದ ಪೊಲೀಸರು ಸ್ಥಳೀಯ ವಾಹನ ಹಾಗೂ ಆಂಬುಲೆನ್ಸ್ ನೆರವಿನಿಂದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕುಂಸಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor