Shivamogga Congress War ಶಿವಮೊಗ್ಗ: ಜಿಲ್ಲೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಗೆ ತೀವ್ರ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೇ, ಪಕ್ಷಕ್ಕೆ ಮುಜುಗರ ಉಂಟುಮಾಡುವ ಘಟನೆಯೊಂದು ನಡೆದಿದೆ. ಜಿಲ್ಲಾಧ್ಯಕ್ಷರ ಆಯ್ಕೆಗಾಗಿ ಮುಖಂಡರ ಅಭಿಪ್ರಾಯ ಸಂಗ್ರಹಿಸುತ್ತಿದ್ದ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
ಶಿವಮೊಗ್ಗ : ಗುಡ್ಡೇಕಲ್ ಜಾತ್ರೆಗೆ ಡೇಟ್ ಫಿಕ್ಸ್ : ಯಾವಾಗ ?
ನಿನ್ನೆ ಸಂಜೆ ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆಯ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ವೀಕ್ಷಕರಾದ ಎಸ್. ಶರತ್ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ನ ಅಭಿಪ್ರಾಯ ಸಂಗ್ರಹದ ವೇಳೆ ಈ ಜಗಳ ಆರಂಭವಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಷಾ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡ ರಂಗೇಗೌಡ ಬೆಂಬಲಿಗರ ನಡುವೆ ಜಗಳ ಉಂಟಾಗಿದೆ. ರಂಗೇಗೌಡರನ್ನು ಕಾಂಗ್ರೆಸ್ ಕಚೇರಿಯೊಳಗೆ ಬಿಡದೆ ಕಾಲರ್ ಹಿಡಿದರು ಎಂಬ ಕಾರಣಕ್ಕೆ ಆರಂಭವಾದ ಗಲಾಟೆಯು, ಪರಸ್ಪರ ತಳ್ಳಾಟ ನಡೆಸಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಈ ಸಂದರ್ಭದಲ್ಲಿ ಕಚೇರಿ ಒಳಗಿದ್ದ ಅನೇಕ ಚೇರ್ಗಳು ಸಹ ಪುಡಿಯಾದವು.
ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಲಾಟೆಯನ್ನು ತಿಳಿಗೊಳಿಸಿದರು. ಅಷ್ಟೇ ಅಲ್ಲದೆ, ಕಚೇರಿಯ ಮುಂದೆ ನೆರೆದಿದ್ದ ಜನರನ್ನು ಮೈಕ್ ನಲ್ಲಿ ಸೂಚನೆ ನೀಡುವ ಮೂಲಕ ಚದುರಿಸಿದರು.
