Thirthahalli Rescue ತೀರ್ಥಹಳ್ಳಿ: ಆಗಸ್ಟ್ 02ರಂದು ಮುಂಜಾನೆ ತೀರ್ಥಹಳ್ಳಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದ ವೇಳೆ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಜೀವ ರಕ್ಷಣಾ ಕಾರ್ಯಕ್ಕೆ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವತಿಯಿಂದ ಅಭಿನಂದಿಸಿ ಗೌರವಿಸಲಾಗಿದೆ.
ಮುರುಡೇಶ್ವರದ ಹೋಂ ಸ್ಟೇಯಲ್ಲಿ ಶಿವಮೊಗ್ಗದ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ?
ಘಟನೆ ವಿವರ ನೋಡುವುದಾದರೆ, ಆಗಸ್ಟ್ 02ರಂದು ಬೆಳಗ್ಗಿನ ಜಾವ ಸರಿ ಸುಮಾರು 2:30ರ ವೇಳೆಗೆ ಪೊಲೀಸ್ ಠಾಣಾ ವ್ಯಾಪ್ತಿಯ ಇಂದಿರಾನಗರ ಹಾಗೂ ಗಾಂಧಿನಗರ ಭಾಗದಲ್ಲಿ ಭಾರಿ ಮಳೆಯಿಂದಾಗಿ ದಿಢೀರ್ ಧರೆ ಕುಸಿತ ಸಂಭವಿಸಿತ್ತು. ಗುಡ್ಡ ಕುಸಿದು ಮನೆಗಳ ಮೇಲೆ ಮಣ್ಣು ಬಿದ್ದಿದ್ದರಿಂದ ಸಾರ್ವಜನಿಕರು ಮಣ್ಣಿನ ಅಡಿ ಸಿಕ್ಕಿಬಿದ್ದಿರುವ ಬಗ್ಗೆ 112ಗೆ ಕರೆ ಬಂದಿತ್ತು. ಕರೆ ತಲುಪಿದ ತಕ್ಷಣವೇ ಇಆರ್‌ವಿಅಧಿಕಾರಿಗಳು ಮಾಡದೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ತಕ್ಷಣವೇ ಕಾರ್ಯಪ್ರವೃತ್ತರಾದ ಇಆರ್‌ಎಸ್‍ಎಸ್ ಪೊಲೀಸ್ ಸಿಬ್ಬಂದಿ ಲೋಕೇಶ್ ಎಂ. ವಿ. (ಎಹೆಚ್‌ಸಿ – 50) ಅವರು, ಸ್ಥಳೀಯ ಸಾರ್ವಜನಿಕರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಕೈಜೋಡಿಸಿ ಮಣ್ಣಿನ ಅಡಿಯಲ್ಲಿ ಸಿಲುಕಿದ್ದವರ ರಕ್ಷಣೆಗೆ ಕಾರ್ಯಾಚರಣೆ ನಡೆಸಿದರು. ಈ ಸಮಯಪ್ರಜ್ಞೆಯ ಕಾರ್ಯಾಚರಣೆಯಿಂದಾಗಿ ಮಣ್ಣಿನಡಿಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಹೊರತೆಗೆದು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದರು.
ಅಪಾಯಕಾರಿ ಸನ್ನಿವೇಶದಲ್ಲೂ ಸಾರ್ವಜನಿಕರ ಜೀವ ರಕ್ಷಿಸಲು ಪ್ರಾಣದ ಹಂಗು ತೊರೆದು ಉತ್ತಮ ಕಾರ್ಯ ನಿರ್ವಹಿಸಿದ ಇಆರ್‌ಎಸ್‌ಎಸ್ ಸಿಬ್ಬಂದಿಯ ಜಾಗರೂಕತೆ ಹಾಗೂ ಧೈರ್ಯವನ್ನು ಶ್ಲಾಘಿಸಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯತ್, ಅವರ ಜೀವ ರಕ್ಷಣಾ ಸೇವೆಯನ್ನು ಅಭಿನಂದಿಸಿವೆ.
ಕಳೆದ ಕೆಲ ತಿಂಗಳ ಹಿಂದೆಯೂ ಸಹ ಇದೇ 112 ಸಿಬ್ಬಂದಿ ಲೋಕೇಶ್ರವರು ಆತ್ಮಹತ್ಯೆ ಮಾಡಿಕೊಳ್ಳಲು ಮನೆ ಬಿಟ್ಟು ಹೋಗಿದ್ದ ವೃದ್ದರೊಬ್ಬರನ್ನು ಮನವೊಲಿಸಿ, ಮನೆಗೆ ತಲುಪಿಸುವ ಕಾರ್ಯದಲ್ಲಿ ಯಶಸ್ವಿಯಾಗಿ ಸಾರ್ವಜನಿಕ ಮೆಚ್ಚುಗೆಗೆ ಪಾತ್ರರಾಗಿದ್ದರು,
