ಮಾನಸಿಕ ಆರೋಗ್ಯ ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ! ಅರ್ಜಿ ಪ್ರಕ್ರಿಯೆ ಹೀಗಿದೆ

ಹಂಚಿಕೊಳ್ಳಿ
WhatsApp Facebook X Telegram
Shivamogga Job ಸಾಂದರ್ಭಿಕ ಚಿತ್ರ
Shivamogga Jobಸಾಂದರ್ಭಿಕ ಚಿತ್ರ

Applications Invited / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಾಲಾ ಶಿಕ್ಷಣ ಇಲಾಖೆಯು ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳ ಬಿ.ಆರ್.ಸಿ. ಕೇಂದ್ರಗಳಲ್ಲಿ 2026-27ನೇ ಸಾಲಿಗೆ 6 ತಿಂಗಳ ತಾತ್ಕಾಲಿಕ ಅವಧಿಗೆ ‘ಮಾನಸಿಕ ಆರೋಗ್ಯ ಸಲಹೆಗಾರ, ಸಮಾಲೋಚಕರ’ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ ಈ ಹಿಂದೆ ಪ್ರಕಟಣೆಯನ್ನು ಹೊರಡಿಸದ್ದ ಇಲಾಖೆ ಇದೀಗ ಅರ್ಜಿ ಪ್ರಕ್ರಿಯೆಯ ವಿವರವನ್ನು ಒದಗಿಸಿದೆ.

ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ. ಅಥವಾ ಎಂ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಿದೆ.

ಅಲ್ಲದೆ ಈ ಹುದ್ದೆ, ಮಾಸಿಕ ವೇತನ ರೂ. 40,000/- ಹಾಗೂ ಪ್ರಯಾಣ ಭತ್ಯೆಯಾಗಿ 10 ಸಾವಿರ ರೂ. ನೀಡಲಾಗುವುದು ಎಂದು ವಿವರಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದು ಎಂದು ವಾರ್ತಾ ಇಲಾಖೆ ಮೂಲಕ ನೀಡಿರುವ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಇನ್ನೂ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆ.17 ರೊಳಗಾಗಿ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor