Container Lorry ಶಿವಮೊಗ್ಗ: ಶಿವಮೊಗ್ಗ-ಸಾಗರ ರಾಷ್ಟ್ರೀಯ ಹೆದ್ದಾರಿ-69ರ ಉಳ್ಳೂರು ಕೆರೆ ಸಮೀಪ ಇಂದು ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್‌ನ 65ನೇ ಸಂಸ್ಥಾಪನಾ ದಿನಾಚರಣೆ: ಯುವಶಕ್ತಿಗೆ ನಾಯಕರ ಕರೆ!
ಸಾಗರ ಕಡೆಯಿಂದ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಕಂಟೇನರ್ ಲಾರಿ ಉಳ್ಳೂರು ಕೆರೆ ಬಳಿ ಬಂದಾಗ, ರಸ್ತೆ ಬದಿಗೆ ವಾಲಿಕೊಂಡಿದ್ದ ಮರವನ್ನು ತಪ್ಪಿಸಲು ಚಾಲಕ ಯತ್ನಿಸಿದ್ದಾನೆ. ಈ ವೇಳೆ ವಾಹನದ ಹತೋಟಿ ಕೈತಪ್ಪಿ ಮರಕ್ಕೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಂಟೇನರ್‌ಗೆ ಹಾನಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ನಡೆದ ಸಮಯದಲ್ಲಿ ಹೆದ್ದಾರಿಯಲ್ಲಿ ಇತರ ವಾಹನಗಳ ದಟ್ಟಣೆ ಕಡಿಮೆ ಇದ್ದಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ.
