ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ! ಉದ್ಯೋಗ ಮಾಹಿತಿ

ಹಂಚಿಕೊಳ್ಳಿ
WhatsApp Facebook X Telegram
Shivamogga malenadu toda image
Shivamogga

Walk-in Interview / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ದಿನಾಂಕ 14-08-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ಬಗ್ಗೆ ವಾರ್ತಾ ಇಲಾಖೆಯಿಂದ ನೀಡಿರುವ ಪ್ರಕಟಣೆಯ ವಿವರ ಹೀಗಿದೆ.

ಈ ನೇರ ಸಂದರ್ಶನದಲ್ಲಿ ಅರವಿಂದ್ ಮೋಟಾರ್ಸ್ ಪ್ರೈ. ಲಿ. ಹಾಗೂ ಸ್ವತಂತ್ರ ಮೈಕ್ರೋಫಿನ್ ಪ್ರೈ. ಲಿ. ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.18 ರಿಂದ 30 ವರ್ಷದೊಳಗಿನ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದವರು ಭಾಗವಹಿಸಬಹುದು.

ನೇರ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಹಾಜರಾಗಬೇಕು.ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor