Government Teachers Recruitment /ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಗಸ್ಟ್ 18 ರಿಂದ ಅರ್ಜಿ ಸಲ್ಲಿ ಸಲ್ಲಿಕೆ ಆರಂಭವಾಗುತ್ತದೆ. ಸಚಿವರಿಗೆ ಖಾತೆ ಹಂಚಿಕೆ ಆದ ಬೆನ್ನಲ್ಲೆ ಇಂತಹದ್ದೊಂದು ಬೆಳವಣಿಗೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಧಿಸೂಚನೆ ಇರುವ ಇ-ರಾಜ್ಯಪತ್ರವನ್ನು ಹಂಚಿ ಕೊಳ್ಳುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವನ್ನು ಖಚಿತ ಪಡಿಸಿದ್ದಾರೆ.
ಈ ಬಗ್ಗೆ ಪೋಸ್ಟ್ನಲ್ಲಿ ಬರೆದುಕೊಂಡಿರುವ ಅವರು ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿತ್ತು. ಸಹಜವಾಗಿಯೇ ನೇಮಕಾತಿಗೆ ಒತ್ತಡವೂ ಇತ್ತು. ಆದರೆ ಒಳ ಮೀಸಲಾತಿ, ನ್ಯಾಯಾಲಯದ ತಡೆ ಯಾತ್ರೆ ಮುಂತಾದ ಕಾರಣಗಳಿಂದ ನೇಮಕಾತಿಗೆ ತಡವಾಗಿತ್ತು. ಈಗ ಎಲ್ಲವೂ ಬಗೆಹರಿದು 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 6,967 ಹುದ್ದೆಗಳು ಮೀಸಲಾಗಿವೆ. 8,033 ಹುದ್ದೆಗಳು ಉಳಿಕೆ ಮೂಲ ವೃಂದದ ಹುದ್ದೆಗಳಾಗಿವೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು, ಗಣಕ ವಿಜ್ಞಾನ ಶಿಕ್ಷಕರನ್ನು, ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಶೀಘ್ರ ದಲ್ಲಿಯೇ ಜಿಲ್ಲಾವಾರು ಖಾಲಿ ಇರುವ ಹುದ್ದೆಗಳಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದುವರಿದು ಆಗಸ್ಟ್ 18 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗುತ್ತದೆ. ನಿಮ್ಮ ಜಿಲ್ಲೆಯಲ್ಲಿ ಯಾವೆಲ್ಲಾ ಶಿಕ್ಷಕರ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ. ಎಷ್ಟು ಹುದ್ದೆಗಳಿವೆ. ಮೀಸಲಾತಿ ಹಂಚಿಕೆ, ನೇಮಕದಲ್ಲಿ ಆಗಿರುವ ಬದಲಾವಣೆಗಳೇನೇನು ಎಂಬೆಲ್ಲಾ ಮಾಹಿತಿಯನ್ನು ಅಧಿಸೂಚನೆಗಳಿಂದ ಪಡೆದುಕೊಳ್ಳಬಹುದು.
ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್ ಸೈಟ್: https:/schooleducation.kar.nic.in . ಪಾರದರ್ಶಕವಾಗಿ ಮತ್ತು ಯಾವುದೇ ಗೊಂದಲವಿಲ್ಲದಂತೆ ಈ ನೇಮಕ ಪ್ರಕ್ರಿಯೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಯನ್ನು ನೀಡಿದ್ದೇನೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುಲು ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ ಎಂದು ಅವರು ತಿಳಿಸಿದ್ದಾರೆ.
