Missing / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ತ್ಯಾಜವಳ್ಳಿ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಪ್ರಕಟಣೆ ನೀಡಲಾಗಿದೆ. ಶಿವಮೊಗ್ಗ ಪೊಲೀಸ್ ಇಲಾಖೆ ನೀಡಿರುವೆ ಪ್ರಕಟಣೆಯ ವಿವರ ಹೀಗಿದೆ.
ಟಿ.ಆರ್. ಶಿವರಾಜ ಎಂಬುವವರ ಪತ್ನಿ 35 ವರ್ಷ ವಯಸ್ಸಿನ ಮಂಜುಳಾ ಕಾಣೆಯಾದವರು. ಇವರು ಕಳೆದ ಜೂನ್ 06 ರಂದು ತಮ್ಮ ಮನೆಯಿಂದ ಹೊರಗೆ ಹೋದವರು, ಮರಳಿ ಮನೆಗೆ ಬಂದಿಲ್ಲ. ಈ ಸಂಬಂದ ಕುಟುಂಬಸ್ಥರು ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಾಪತ್ತೆಯಾಗಿರುವ ಮಂಜುಳಾ ಸುಮಾರು 5 ಅಡಿ ಎತ್ತರವನ್ನು ಹೊಂದಿದ್ದು, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಎಣ್ಣೆಗೆಂಪು ಮೈಬಣ್ಣ ಹಾಗೂ ದುಂಡು ಮುಖ ಹೊಂದಿರುವ ಇವರು, ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ನೀಲಿ ಬಣ್ಣದ ಚೂಡಿದಾರ ಧರಿಸಿದ್ದರು
ಈ ಕುರಿತು ನಾಪತ್ತೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ಪತ್ತೆಗಾಗಿ ಪ್ರಕಟಣೆ ನೀಡಿದ್ದಾರೆ. ಇದೇ ವೇಳೆ, ಸಾರ್ವಜನಿಕರಿಗೂ ಮನವಿ ಮಾಡಿರುವ ಪೊಲೀಸ್ ಇಲಾಖೆ, ಮಹಿಳೆಯ ಬಗ್ಗೆ ಯಾರಿಗಾದರೂ ಯಾವುದೇ ರೀತಿಯ ಸುಳಿವು ಅಥವಾ ಮಾಹಿತಿ ಲಭ್ಯವಾದಲ್ಲಿ ತಕ್ಷಣವೇ ಕುಂಸಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 9480803351 ಗೆ ಕರೆ ಮಾಡಿ ತಿಳಿಸಬೇಕು.
ಇಲ್ಲವೇ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (ಎಸ್‌ಪಿ) ಕಚೇರಿಯ ದೂರವಾಣಿ ಸಂಖ್ಯೆಗಳಾದ 08182-261402 ಅಥವಾ 08182-261400 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ಮೂಲಕ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.
