ಶಿವಮೊಗ್ಗ :ರಾಜ್ಯದ ಬಹುತೇಕ ಶಾಲೆಗಳಿಗೆ ಪಠ್ಯಪುಸ್ತಕಗಳ ಸರಬರಾಜು ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೇ ಮೊದಲ ಬಾರಿಗೆ 1 ಮತ್ತು 2ನೇ ಪಿಯುಸಿ (PUC) ವಿದ್ಯಾರ್ಥಿಗಳಿಗೂ ಸಹ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗ : ಈ ಕೆಲಸ ಆಗಬೇಕೆಂದರೆ ಶಿವಮೊಗ್ಗ ಬಂದ್ ಅನಿವಾರ್ಯ : ಕಲ್ಲೂರು ಮೇಘರಾಜ್ ಹೇಳಿದ್ದೇನು
ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಶಾಲಾ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಶೂ-ಸಾಕ್ಸ್ ವಿತರಣೆಗೆ ಇಲಾಖೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಯಲ್ಲಿ ವ್ಯತ್ಯಾಸವಾಗಿರುವ ಅಥವಾ ಹೆಚ್ಚುವರಿ ಬೇಡಿಕೆ ಇರುವ ಶಾಲೆಗಳಿಗೆ ಶೀಘ್ರದಲ್ಲೇ ಉಳಿಕೆ ಪಠ್ಯಪುಸ್ತಕಗಳನ್ನು ಶೀಘ್ರವಾಗಿ ತಲುಪಿಸಲು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.
Free PUC Textbooks ರಾಜ್ಯಮಟ್ಟದ ಟೆಂಡರ್ ಮೂಲಕ ಶೂ-ಸಾಕ್ಸ್ ವಿತರಣೆ
ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ನೀಡುವ ಪ್ರಕ್ರಿಯೆಯ ಬಗ್ಗೆ ವಿವರಣೆ ನೀಡಿದ ಸಚಿವರು, ಒಂದೊಮ್ಮೆ ಶೂ ಅಳತೆಯಲ್ಲಿ ವ್ಯತ್ಯಾಸಗಳಿದ್ದರೆ ತಕ್ಷಣವೇ ಅವುಗಳನ್ನು ಬದಲಾಯಿಸಿಕೊಡಲು ಶಾಲಾ ಮಟ್ಟದಲ್ಲೇ ವ್ಯವಸ್ಥೆ ಮಾಡಲಾಗಿದೆ. ಹಿಂದೆ ಸ್ಥಳೀಯ ಹಂತದಲ್ಲಿ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿದ್ದವು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಈ ಬಾರಿ ಸಂಪುಟದ ಒಪ್ಪಿಗೆ ಪಡೆದು ಪಾರದರ್ಶಕವಾಗಿ ರಾಜ್ಯಮಟ್ಟದಲ್ಲೇ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಮಕ್ಕಳ ಸೌಲಭ್ಯಗಳ ವಿಷಯದಲ್ಲಿ ಕಳಪೆತನ ಪ್ರದರ್ಶಿಸುವ ಅಥವಾ ಯಾವುದೇ ರೀತಿಯ ದುರಾಡಳಿತ ಎಸಗುವ ಟೆಂಡರ್‌ದಾರರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ನಮಗೆ ಮಕ್ಕಳ ಭವಿಷ್ಯ ಹಾಗೂ ಕಲ್ಯಾಣವೇ ಪ್ರಥಮ ಆದ್ಯತೆಯಾಗಿದೆ. ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯುತ್, ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯದ ಹಾಲು, ಮೊಟ್ಟೆ, ಶೂ-ಸಾಕ್ಸ್ ಹಾಗೂ ಪಠ್ಯಪುಸ್ತಕ ಸೌಲಭ್ಯಗಳು ರಾಜ್ಯದ ಶೇ. 100 ರಷ್ಟು ಅರ್ಹ ವಿದ್ಯಾರ್ಥಿಗಳಿಗೆ ತಲುಪುವುದನ್ನು ಶಿಕ್ಷಣ ಇಲಾಖೆ ಖಾತರಿಪಡಿಸಲಿದೆ” ಎಂದು ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.
