ಬಜರಂಗದಳದ ಪ್ರಮುಖರಾದ ಶರಣ್​​​​​ ಪಂಪ್​ವೆಲ್​ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ, ಯಾವಾಗಿನವರೆಗೆ,

ಕೊನೆಯ ನವೀಕರಣ: 19 ಆಗಷ್ಟ್ 2026, 2:56 ಅಪರಾಹ್ನ

ಹಂಚಿಕೊಳ್ಳಿ
WhatsApp Facebook X Telegram
Shivamogga DC Bans Sharan Pumpwell Entry
Shivamogga DC Bans Sharan Pumpwell Entry

ಶಿವಮೊಗ್ಗ, ಮಲೆನಾಡುಟುಡೆ ನ್ಯೂಸ್​ :  ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುಂಜಾಗ್ರತಾ ಕ್ರಮವಾಗಿ, ಬಜರಂಗದಳದ ಪ್ರಮುಖ ಮುಖಂಡ ಶರಣ್ ಕುಮಾರ್ ಪಂಪ್‌ವೆಲ್ ಅವರು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. 

ಶರತಣ್​​ ಕುಮಾರ್ ಪಂಪ್‌ವೆಲ್ ಅವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಅವರ ಪ್ರಚೋದನಕಾರಿ ಭಾಷಣಗಳಿಂದ ಸಾರ್ವಜನಿಕ ಶಾಂತಿ ಭಂಗ ಉಂಟಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವರದಿಯನ್ನು ಆಧರಿಸಿ ಈ ನಿರ್ಬಂಧಕಾಜ್ಞೆ ಜಾರಿಗೊಳಿಸಲಾಗಿದೆ. 

ಈ ಹಿನ್ನೆಲೆಯಲ್ಲಿ 2026ರ ಆಗಸ್ಟ್ 19 ರಿಂದ ಮುಂದಿನ 10 ದಿನಗಳ ಕಾಲ ಶರಣ್ ಕುಮಾರ್ ಪಂಪ್‌ವೆಲ್ ಅವರು ಶಿವಮೊಗ್ಗ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor