ಶಿವಮೊಗ್ಗ: ಲಾರಿ-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ, ಪ್ರಯಾಣಿಕರಿಗೆ ಗಂಭೀರ ಗಾಯ

ಹಂಚಿಕೊಳ್ಳಿ
WhatsApp Facebook X Telegram
Truck Hits Auto

ಸೊರಬ: ಲಾರಿ ಹಾಗೂ ಪ್ಯಾಸೆಂಜರ್ ಆಟೋ ಒಂದರ ನಡುವೆ ಭೀಕರ ಅಪಘಾತ ಸಂಭವಿಸಿ, ಆಟೋ ಚಾಲಕ ಹಾಗೂ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೊರಬಾ  ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಅಪಾಘತ ನಡೆದಿದೆ ಎಂದು  ಸ್ಥಳೀಯರು 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕರೆ ಸ್ವೀಕರಿಸಿದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಇಆರ್‌ವಿ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ.ಅಪಘಾತದ ತೀವ್ರತೆಗೆ ಆಟೋದಲ್ಲಿದ್ದ ಪ್ರಯಾಣಿಕರು ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಕುರಿತು ಇಆರ್‌ವಿ ಸಿಬ್ಬಂದಿಯು ಸೊರಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಠಾಣೆಯ ಅಧಿಕಾರಿಗಳ ಸೂಚನೆಯಂತೆ ಅಪಘಾತಕ್ಕೀಡಾದ ಲಾರಿ ಹಾಗೂ ಆಟೋ ಎರಡೂ ವಾಹನಗಳನ್ನು ವಶಕ್ಕೆ ಪಡೆದು ಠಾಣೆಗೆ ತೆಗೆದುಕೊಂಡು ಹೋಗಲಾಗಿದೆ. 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor