ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಹೊಳೆಹೊನ್ನೂರು ಶಾಖಾ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 23ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹೊಳೆಹೊನ್ನೂರು, ನಾಗತಿಬೆಳಗಲು ತಾಂಡ, ಹೊಸಕೊಪ್ಪ, ತಳ್ಳಿಕಟ್ಟೆ, ಜಂಬರಘಟ್ಟ, ಕಾಗೆಕೊಡಮಗ್ಗೆ, ಮೂಡಲವಿಠಲಾಪುರ, ಕನಸಿನಕಟ್ಟೆ, ಹೊಳೆಬೈರನಹಳ್ಳಿ, ಎಮ್ಮೆಹಟ್ಟಿ, ಹುಲಿಮಟ್ಟಿ ಕ್ಯಾಂಪ್, ಆಗಸನಹಳ್ಳಿ, ಸಿದ್ದಿಪುರ, ದಾಸರಕಲ್ಲಹಳ್ಳಿ, ಸನ್ಯಾಸಿಕೊಡಮಗ್ಗೆ, ಅರದೋಟ್ಟು, ಡಣಾಯಕಪುರ, ನಾಗತಿಬೆಳಗಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಹೊಸನಗರ ಮೆಸ್ಕಾಂ ಉಪವಿಭಾಗದ ಪಟ್ಟಣ ವ್ಯಾಪ್ತಿಯಲ್ಲಿ ಹೊಸ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 23ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ತಾಲೂಕಿನ ಜೇನಿ, ಕೋಡೂರು, ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಹೊಸನಗರ ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ ನಗರದ ಎಂಆರ್‌ಎಸ್ ಕೇಂದ್ರ ವ್ಯಾಪ್ತಿಯಲ್ಲಿ ಆಗಸ್ಟ್ 25ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ. ಬೀರನಹಳ್ಳಿ, ಹೊಯ್ದನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೊನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೊನಿ, ಜಿ.ಜಿ. ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ಮೂಲ : ಮೆಸ್ಕಾಂ ಶಿವಮೊಗ್ಗ ಪ್ರಕಟಣೆ
