ಶಿವಮೊಗ್ಗ : ವ್ಯಕ್ತಿಯೊಬ್ಬ ಬೈಕ್ನಲ್ಲಿ ತೆರಳಲು ಸಿದ್ದವಾದಾಗ ಮುಸಿಯವೊಂದು ಆತನ ಮೇಲೆ ಏಕಾಏಕಿ ದಾಳಿ ನಡೆಸಿದ ಘಟನೆ ನಗರದ ಕಾಶಿಪುರ ಗೇಟ್ ಬಳಿ ನಡೆದಿದೆ. ದಾಳಿಯಿಂದಾಗಿ ಕುಮಾರ್ ನಾಯ್ಕ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ಕುಮಾರ್ ನಾಯ್ಕ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕಾಶಿಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಮುಸಿಯಾ ಸಾರ್ವಜನಿಕವಾಗಿ ಓಡಾಡುತ್ತಿದ್ದು, ಸ್ಥಳೀಯರಲ್ಲಿ ತೀವ್ರ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಮುಸಿಯಾನನ್ನು ತಕ್ಷಣವೇ ಸೆರೆಹಿಡಿದು ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅರಣ್ಯ ಇಲಾಖೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.
