40  ರೂಪಾಯಿ ಹೆಚ್ಚು ಕೇಳಿದ ಆಟೋ ಚಾಲಕನ ವಿರುದ್ಧ ಪ್ರಕರಣ : ಏನಿದು ಘಟನೆ

ಹಂಚಿಕೊಳ್ಳಿ
WhatsApp Facebook X Telegram
Auto Driver
Auto Driver

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ನಗರದ ರೈಲ್ವೆ ನಿಲ್ದಾಣದ ಪ್ರೀ-ಪೇಯ್ಡ್ ಆಟೋ ಟಿಕೆಟ್‌ನಲ್ಲಿ ನಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ 40 ಕೇಳಿ, ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆ.21ರಂದು ರಾತ್ರಿ 7.30ರ ಸುಮಾರಿಗೆ ಪ್ರಯಾಣಿಕರೊಬ್ಬರು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಕಾಶಿಪುರಕ್ಕೆ ತೆರಳಲು ಪ್ರೀ-ಪೇಯ್ಡ್ ಆಟೋ ಟಿಕೆಟ್ ಪಡೆದಿದ್ದರು. ಆದರೆ. ಸಂಬಂಧಿಸಿದ ಆಟೋ ಚಾಲಕ ಟಿಕೆಟ್‌ನಲ್ಲಿ ನಿಗದಿಪಡಿಸಿದ್ದ ದರಕ್ಕಿಂತ ₹40 ಹೆಚ್ಚುವರಿ ಹಣ ಕೇಳಿದ್ದಲ್ಲದೆ, ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರು ನೀಡಲಾಗಿತ್ತು.ದೂರಿನ ಹಿನ್ನೆಲೆಯಲ್ಲಿ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಚಾಲಕನ ವಿರುದ್ಧ ಪರವಾನಗಿ ಷರತ್ತು ಉಲ್ಲಂಘನೆ ಆರೋಪದಡಿ ಮೋಟಾರು ವಾಹನ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ.ಮುಂದಿನ ಕಾನೂನು ಕ್ರಮಕ್ಕಾಗಿ ಪ್ರಕರಣದ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor