ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಹರಕೆರೆ ರಿಂಗ್‌ರೋಡ್‌ನಲ್ಲಿ (Harakere Ring Road) ಕಾರಿನಲ್ಲಿ ಬಂದ ಆರೋಪಿಗಳು ಇಬ್ಬರಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿ ಹಣ ಮತ್ತು ಮೊಬೈಲ್‌ಗಳನ್ನು ಕಿತ್ತುಕೊಂಡು ಹೋಗಿದ್ದ ಪ್ರಕರಣ ಸಂಬಂಧ ತುಂಗಾನಗರ ಪೊಲೀಸರು ಕ್ವಿಕ್ ಆಕ್ಷನ್ ತೆಗೆದುಕೊಂಡಿದ್ದಾರೆ. ಏಕೆಂದರೆ, ಇನ್ನಷ್ಟು ಪೂರ್ತಿಯಾಗುತ್ತಿರುವ ರಿಂಗ್‌ರೋಡ್‌ನಲ್ಲಿ ರಾಬರಿ ನಡೆಯುತ್ತದೆ ಎನ್ನುವುದು ಆತಂಕ ಮೂಡಿಸಿತ್ತು. ಆದರೆ ಪ್ರಕರಣ ದಾಖಲಾದ ಬೆನ್ನಲ್ಲೆ ಆರೋಪಿಗಳನ್ನ ಹುಡುಕಿ ಅರೆಸ್ಟ್ ಮಾಡಿದ್ದಾರೆ ತುಂಗಾನಗರ ಪೊಲೀಸ್ ಸ್ಟೇಷನ್ ಸಿಬ್ಬಂದಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ನಗದು, ಮೊಬೈಲ್‌ಗಳು ಮತ್ತು ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಇನ್ನೋವಾ ಕಾರನ್ನು ವಶಕ್ಕೆ ಪಡೆದಿದ್ದಾರೆ. ಉಳಿದಂತೆ ನಡೆದ ಘಟನೆ ವಿವರ ಹೀಗಿದೆ
ನಡೆದ ಘಟನೆಯ ವಿವರ
ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹರಕೆರೆ ರಿಂಗ್‌ರೋಡ್‌ನಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಲ್ಲಿದ್ದ ಇಬ್ಬರನ್ನ ಹೆದರಿಸಿ, ಹಲ್ಲೆ ನಡೆಸಿ ಅವರ ಬಳಿಯಿದ್ದ ಹಣ ಮತ್ತು ಮೊಬೈಲ್‌ಗಳನ್ನು ಕಿತ್ತುಕೊಂಡು ಹೋಗಿದ್ದರು. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಲಂ 309(6)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಸ್ಪೆಷಲ್ ಟೀಂನ್ನ ಆಕ್ಷನ್ಗೆ ಇಳಿಸಿದ್ದರು.
ತುಂಗಾನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗುರುರಾಜ್ ಕೆ.ಟಿ. ಅವರ ನೇತೃತ್ವದ ತಂಡದಲ್ಲಿ ಪಿಎಸ್‌ಐ ಗಾದಿಲಿಂಗಪ್ಪ ಗೌಡರ್ ಮತ್ತು ರಘುವೀರ್, ಮುಖ್ಯ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಶ್ಯಾಮ್ ಕುಮಾರ್, ಮೋಹನ್ ಕುಮಾರ್, ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ನಾಗಪ್ಪ ಅಡಿವಪ್ಪನವರ್, ಪ್ರಶಾಂತ ಕುಮಾರ್, ಅಬ್ದುಲ್ ಖಾದರ್ ಜಿಲಾನಿ, ಪ್ರವೀಣ್ ಹಾಗೂ ಸಹಾಯಕ ಮುಖ್ಯ ಪೊಲೀಸ್ ಕಾನ್‌ಸ್ಟೆಬಲ್ ಪುನೀತ್ ಇದ್ದರು.
ಈ ಟೀಂ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಅಣ್ಣಾನಗರದ ಅಮಾನ್ (24), ಅಶೋಕನಗರದ ಮೊಹಮ್ಮದ್ ಶೆಹಜಾನ್ (22) ಮತ್ತು ಗೋಪಿ ಸರ್ಕಲ್‌ನ ಹೇಮಂತ ಎಸ್.ಎ. (21) ಅವರನ್ನು ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ₹30,500 ನಗದು, 2 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಒಂದು ಇನ್ನೋವಾ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ
