ಚಂದ್ರಗುತ್ತಿಯಲ್ಲಿ ಮನೆಯ ಹಿಂಭಾಗ ಕಾಣಿಸಿಕೊಂಡ 9 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹಂಚಿಕೊಳ್ಳಿ
WhatsApp Facebook X Telegram
ಚಂದ್ರಗುತ್ತಿಯಲ್ಲಿ ಮನೆಯ ಹಿಂಭಾಗ ಕಾಣಿಸಿಕೊಂಡ 9 ಅಡಿ ಉದ್ದದ ಹೆಬ್ಬಾವಿನ ರಕ್ಷಣೆ

ಮಲೆನಾಡು ಟುಡೆ ಸುದ್ದಿ / ಸೊರಬ / ತಾಲೂಕಿನ ಚಂದ್ರಗುತ್ತಿ (Chandragutti) ಗ್ರಾಮದ ಮನೆಯೊಂದರ ಹಿಂಭಾಗದಲ್ಲಿ ಸುಮಾರು 9 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಉಂಟುಮಾಡಿತ್ತು. ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ರಕ್ಷಿಸಿ, ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ಚಂದ್ರಗುತ್ತಿ ಗ್ರಾಮದ ನಾರಾಯಣಪ್ಪ ಎಂಬುವವರ ಮನೆಯ ಹಿಂಭಾಗದಲ್ಲಿ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಹಾವನ್ನು ಗಮನಿಸಿದ ಮನೆಯ ನಿವಾಸಿ ಆದರ್ಶ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಉಪ ವಲಯ ಅರಣ್ಯಾಧಿಕಾರಿ ಮೋಹನ್ ಹಾಗೂ ಗಸ್ತು ಅರಣ್ಯ ಪಾಲಕ ಮೌನೇಶ್ ಕಾರ್ಯಾಚರಣೆಯನ್ನು ಆರಂಭಿಸಿದರು. ಹೆಬ್ಬಾವಿಗೆ ಯಾವುದೇ ರೀತಿಯ ಹಾನಿಯಾಗದಂತೆ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿ ಅದನ್ನು ಸುರಕ್ಷಿತವಾಗಿ ಸೆರೆಹಿಡಿದರು. ಈ ಕಾರ್ಯಾಚರಣೆಯಲ್ಲಿ ಸ್ಥಳೀಯರಾದ ರಘು ಸ್ವಾದಿ ಮತ್ತು ಆದರ್ಶ ಅವರು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಕೈಜೋಡಿಸಿ ಸಹಕರಿಸಿದರು.

ರಕ್ಷಿಸಲಾದ ಹೆಬ್ಬಾವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಳಿಕ ಸಮೀಪದ ದಟ್ಟ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ ಎಂದು ಅರಣ್ಯ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor