ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಶ್ರಾವಣ ಮಾಸದ ವಿಶೇಷ ಪೂಜೆ! ಭಕ್ತರಿಗೆ ಮಾಹಿತಿ!

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಬಿ.ಎಚ್. ರಸ್ತೆಯಲ್ಲಿರುವ ಮೈಲಾರೇಶ್ವರ ದೇವಸ್ಥಾನದಲ್ಲಿ (Mylareshwara Temple in Shivamogga) ಶ್ರಾವಣ ಮಾಸದ ಪ್ರಯುಕ್ತ ಆಗಸ್ಟ್ 23ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ವಿಶೇಷ ಪೂಜೆಗಳು ನಡೆಯಲಿವೆ. ಈ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 9 ಗಂಟೆಗೆ ಸಾಮೂಹಿಕ ಹಾಲಿನ ಅಭಿಷೇಕ ಜರುಗಲಿದೆ. ಆಗಸ್ಟ್ 30ರಂದು ಶತವಾರ ರುದ್ರಾಭಿಷೇಕ ನಡೆಯಲಿದ್ದು, ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ನೆರವೇರಲಿದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸೆಪ್ಟೆಂಬರ್ 4ರಂದು ರಣದಮ್ಮ ದೇವಿಯ ಸನ್ನಿಧಿಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಾಮೂಹಿಕ ತುಪ್ಪದ ಅಭಿಷೇಕ ನಡೆಯಲಿದೆ. ಇದೇ ಸಂದರ್ಭದಲ್ಲಿ ಮಹಿಳೆಯರಿಂದ ಸಾಮೂಹಿಕ ಸಹಸ್ರ ಕುಂಕುಮಾರ್ಚನೆ ಜರುಗಲಿದೆ.

ಸೆಪ್ಟೆಂಬರ್ 6ರಂದು ಏಕಾದಶ ರುದ್ರಾಭಿಷೇಕ ಮತ್ತು ಲಕ್ಷ ಭಂಡಾರ ಅರ್ಚನೆ ನಡೆಯಲಿದೆ. ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮಗಳು ಸೆಪ್ಟೆಂಬರ್ 9ರವರೆಗೆ ಮುಂದುವರಿಯಲಿವೆ.

ಹೆಚ್ಚಿನ ಮಾಹಿತಿಗಾಗಿ ದೇವಸ್ಥಾನದ ಅರ್ಚಕರನ್ನು 9480354402 ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor