ಬ್ರೈಟ್​ ಹೋಟೆಲ್​ ಮುಂಭಾಗ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು!

ಹಂಚಿಕೊಳ್ಳಿ
WhatsApp Facebook X Telegram
ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಶಿವಮೊಗ್ಗದ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಬಸ್ ನಿಲ್ದಾಣದ ಎದುರಿನ ಬ್ರೈಟ್ ಹೊಟೇಲ್ ಮುಂಭಾಗ ಫುಟ್‌ಪಾತ್ ಮೇಲೆ ಸುಸ್ತಾಗಿ ಮಲಗಿದ್ದ 55ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ (Unidentified Man Dies) ಸಾವನ್ನಪ್ಪಿದ್ದಾರೆ. ಅವರನ್ನ ಕಳೆದ ಆಗಸ್ಟ್ 20 ರಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಆಗಸ್ಟ್ 20ರಂದು ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಫುಟ್‌ಪಾತ್ ಮೇಲೆ ಬಿದ್ದಿದ್ದರು. ಅವರನ್ನ ನೋಡಿದವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಆನಂತರ ಅವರನ್ನ ಮೆಗ್ಗಾನ್​ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಮೃತಪಟ್ಟಿದ್ದು, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಅಲ್ಲದೆ ಮೃತ ವ್ಯಕ್ತಿಯ ಹೆಸರು, ವಿಳಾಸ ಅಥವಾ ವಾರಸುದಾರರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಹೀಗಾಗಿ ಅವರ ಗುರುತು ಪತ್ತೆಗೆ ಸಹಕರಿಸುವಂತೆ ಕೋರಿದೆ. ಮೃತ ವ್ಯಕ್ತಿ ಸುಮಾರು 5.7 ಅಡಿ ಎತ್ತರ ಹೊಂದಿದ್ದು, ಸಾಧಾರಣ ಮೈಕಟ್ಟು, ಕೋಲುಮುಖ ಹಾಗೂ ಗೋಧಿ ಮೈಬಣ್ಣ ಹೊಂದಿದ್ದಾರೆ. ನೀಳವಾದ ಮೂಗಿನ ಮೇಲೆ ಹಾಗೂ ಎದೆಯ ಮಧ್ಯಭಾಗದಲ್ಲಿ ಕಪ್ಪು ಮಚ್ಚೆಯ ಗುರುತುಗಳಿವೆ. ಕಪ್ಪು ಬಣ್ಣದ ಜರ್ಕಿನ್ ಮತ್ತು ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾರೆ.

ಮೃತ ವ್ಯಕ್ತಿಯ ಗುರುತು ಅಥವಾ ಅವರ ವಾರಸುದಾರರ ಕುರಿತು ಮಾಹಿತಿ ಇರುವವರು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08182-261414 ಅಥವಾ 9902996413ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor