ಜಿಲ್ಲೆಯಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ?

ಹಂಚಿಕೊಳ್ಳಿ
WhatsApp Facebook X Telegram
Shivamogga DJ, Fireworks Banned for Eid Milad ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
Shivamogga DJ, Fireworks Banned for Eid Milad ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಮಲೆನಾಡು ಟುಡೆ ನ್ಯೂಸ್​​ / ಶಿವಮೊಗ್ಗ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್  ಡಿಜೆ ಸಿಸ್ಟಂ ಬಳಕೆ  ಹಾಗೂ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 26 ರಂದು ಜಿಲ್ಲಾದ್ಯಂತ ಈದ್ ಮಿಲಾದ್ ಹಬ್ಬ ನಡೆಯಲಿದ್ದು, ಮೆರವಣಿಗೆಯ ಸಮಯದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಡಿಜೆ ಸಿಸ್ಟಂ ಮತ್ತು ಸಿಡಿಮದ್ದುಗಳನ್ನು ಬಳಸುವುದರಿಂದ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಹಾಗೂ ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆ ಉಂಟಾಗುವ ಹಾಗೆಯೇ ಇತರ ಧರ್ಮೀಯರ ಭಾವನೆಗಳಿಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ. 

ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಆಗಸ್ಟ್ 25 ರಿಂದ ಆಗಸ್ಟ್ 28 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor