ಮಲೆನಾಡು ಟುಡೆ ಸುದ್ದಿ / ತೀರ್ಥಹಳ್ಳಿ / ತೀರ್ಥಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ (Power Cut in Thirthahalli)ಮೆಸ್ಕಾಂ ವತಿಯಿಂದ ನಿರ್ವಹಣೆ ಹಾಗೂ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 27 ಮತ್ತು 28ರಂದು ತಾಲ್ಲೂಕಿನ ಹಲವು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಆಗಸ್ಟ್ 27ರಂದು 110/11 ಕೆ.ವಿ. ಕಮ್ಮರಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಸಂಬಂಧಪಟ್ಟ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಕಮ್ಮರಡಿ, ಆಗುಂಬೆ, ನಾಲೂರು, ಗುಡ್ಡೇಕೇರಿ, ತೀರ್ಥಮತ್ತೂರು, ಕೆಂದಾಳಬೈಲು, ಬಿದರಗೋಡು, ಕಲ್ಮನೆ, ಉಂಟೂರುಕಟ್ಟೆ ಕೈಮರ, ಹೊನ್ನೇತಾಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಈ ಅವಧಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ತೀರ್ಥಹಳ್ಳಿ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಮನವಿ ಮಾಡಿದ್ದಾರೆ.
ಇದರೊಂದಿಗೆ ಆಗಸ್ಟ್ 28ರಂದು ಮತ್ತೊಂದು ನಿರ್ವಹಣಾ ಮತ್ತು ಸುರಕ್ಷತಾ ಕಾಮಗಾರಿ ನಡೆಯಲಿದ್ದು, ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ತಿಳಿಸಿದೆ.ವಿದ್ಯುತ್ ಮಾರ್ಗದತ್ತ ಬಾಗಿರುವ ಅಪಾಯಕಾರಿ ಅಕೇಶಿಯಾ ಮರಗಳನ್ನು ಅರಣ್ಯ ಇಲಾಖೆ ವತಿಯಿಂದ ಕಟಾವು ಮಾಡುವ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಬಳಗಟ್ಟೆ, ದೇವಂಗಿ, ಗಡಿಕಲ್ಲು, ಇಳಿಕೆರೆ, ಬಸವಾನಿ, ಅಂದಗೆರೆ, ಮಧುಗೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 28ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅಪಾಯಕಾರಿ ಮರಗಳ ತೆರವು ಕಾರ್ಯಾಚರಣೆ ಹಾಗೂ ವಿದ್ಯುತ್ ಮಾರ್ಗದ ಸುರಕ್ಷತೆ ದೃಷ್ಟಿಯಿಂದ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವುದರೊಂದಿಗೆ ಮೆಸ್ಕಾಂ ಸಿಬ್ಬಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
