ಕ್ರಿಶ್ಚಿಯನ್ ಸಮುದಾಯದವರಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಹಂಚಿಕೊಳ್ಳಿ
WhatsApp Facebook X Telegram
Nepal Floods
Nepal Floods

ಮಲೆನಾಡು ಟುಡ ಸುದ್ದಿ /  ಶಿವಮೊಗ್ಗ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದ ವತಿಯಿಂದ 2026-27 ನೇ ಸಾಲಿಗೆ ಕ್ರಿಶ್ಚಿಯನ್ ಸಮುದಾಯದವರಿಗೆ ವಿವಿಧ ಯೋಜನೆಗಳಿಗೆ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಅರಿವು ವಿದ್ಯಾಭ್ಯಾಸ ಸಾಲ ಯೋಜನೆ: ಈ ಯೋಜನೆಯಡಿ ಸಿಇಟಿ/ನೀಟ್/ಪಿಜಿಸಿಇಟಿ/ಸಿಎಲ್‌ಎಟಿ/ಐಸಿಎಆರ್ ಮೂಲಕ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಶೈಕ್ಷಣಿಕ ಸಾಲವನ್ನು ಒದಗಿಸಲಾಗಿರುತ್ತದೆ. ಈ ಸಾಲಿನಿಂದ ಈ ಯೋಜನೆಯ ಸೌಲಭ್ಯವನ್ನು ಸರ್ಕಾರಿ/ಮ್ಯಾನೇಜ್‌ಮೆಂಟ್ ಹಾಗೂ ಖಾಸಗಿ ಸೀಟಿಗಳಿಗೂ ಅನ್ವಯಿಸಲಾಗಿದೆ. ಈ ಎಲ್ಲಾ ಪ್ರವೇಶ ಪರೀಕ್ಷಾ ಕೋರ್ಸುಗಳಿಗೆ ಮಾತ್ರ ಸೀಮಿತಗೊಳಿಸಿದ್ದು, ರಾಷ್ಟ್ರೀಯ/ರಾಜ್ಯ ಮಟ್ಟದಲ್ಲಿ ಮಾನ್ಯತೆ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿ ಪಿಹೆಚ್.ಡಿ/ ಐಟಿಐ/ಡಿಪ್ಲೋಮಾ ಕೋರ್ಸುಗಳನ್ನು ವ್ಯಾಸಂಗ ಮಾಡಲು ಬಡ್ಡಿರಹಿತ ಶೈಕ್ಷಣಿಕ ಸಾಲವನ್ನು ಒದಗಿಸಲಾಗುವುದು. 

ವಿದೇಶಿ ವ್ಯಾಸಂಗ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು ಪಡೆಯಲು ರೂ. 20 ಲಕ್ಷದವರೆಗೆ ಬಡ್ಡಿರಹಿತ ಸಾಲ ಪಡೆಯಬಹುದು. ಕೋರ್ಸ್ ಪೂರ್ಣಗೊಂಡ 6 ತಿಂಗಳ ನಂತರದಿಂದ 60 ಕಂತುಗಳಲ್ಲಿ ಸಾಲವನ್ನು ಮರುಪಾವತಿಸಬೇಕು. ಸಾಲ ಮಂಜೂರಾತಿ ಮೊತ್ತದಿಂದ 2% ಸೇವಾ ಶುಲ್ಕವನ್ನು ಸಾಲ ವಿತರಣೆಯ ಸಮಯದಲ್ಲಿ ಕಡಿತಗೊಳಿಸಲಾಗುವುದು.

ವಿದೇಶದಲ್ಲಿ ವ್ಯಾಸಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ ಮತ್ತು ಭಾರತ ದೇಶದ ಪ್ರತಿಷ್ಠೆಯ ಐಐಟಿಎಸ್ ಐಐಎಂಎಸ್, ಐಎಸ್‌ಸಿ ಸಂಸ್ಥೆಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಪಡೆಯಲು ರೂ.20 ಲಕ್ಷದವರೆಗೂ ಸಾಲವನ್ನು ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಒದಗಿಸಲಾಗುವುದು. 

ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟಿವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿ ಮಾಡುವ ಸಲುವಾಗಿ ರಾಷ್ಟ್ರೀಕೃತ/ಶೆಡ್ಯೂಲ್ ಬ್ಯಾಂಕ್/ಆರ್‌ಬಿಐ ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕ ವೆಚ್ಚದ ಶೇ.50 ಅಥವಾ ಗರಿಷ್ಟ ರೂ.2 ಲಕ್ಷ ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು. ಸಹಾಯಧನವು ಬ್ಯಾಂಕ್ ಎಂಡ್ ಸಬ್ಸಿಡಿಯಾಗಿದ್ದು, ಸ್ವಸಹಾಯ ಸಂಘಗಳು ಆರ್ಥಿಕ ಬ್ಯಾಂಕ್‌ ಗಳಿಂದ ಪಡೆದ ಸಾಲದ ಮರುಪಾವತಿಗೆ ಹೊಂದಾಣಿಕೆ ಮಾಡಲಾಗುವುದು. 

ಫಾಸ್ಟ್ಫುಡ್ ಟ್ರಕ್/ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಯೋಜನೆಯಡಿ ಆಧುನಿಕ ಮತ್ತು ಸುಸಜ್ಜಿತವಾದ ಈಮೊಬೈಲ್ ಫುಡ್ ಟ್ರಕ್/ ಟ್ರೈಲರ್ ಆಹಾರ ತಯಾರಿಕೆ ಮತ್ತು ಸೇವೆಯನ್ನು ಸಮರ್ಥವಾಗಿ ನಿರ್ವಹಿಸಲು ವಿನ್ಯಾಸಗೊಳಿಸಲಾಗಿದೆ. ಫಾಸ್ಟ್ ಫುಡ್ ಲಘು ಉಪಹಾರ ಪಾನೀಯಗಳು ಮತ್ತು ಕ್ಯಾಟರಿಂಗ್ ಸೇವೆಗಳಿಗೆ ಅತ್ಯುತ್ತಮವಾಗಿರುವ ಇದು ಸಂಚಾರಿ ಆಹಾರ ಉದ್ಯಮಗಳಿಗೆ ಹೊಂದಿಕೊಳ್ಳುವ ಹಾಗೂ ವೃತ್ತಿಪರ ಪರಿಹಾರವನ್ನು ಒದಗಿಸುತ್ತದೆ. 

ಈ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರಬೇಕು. ಅರ್ಜಿದಾರರು ಕರ್ನಾಟಕದ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷದೊಳಗಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಟ 18 ರಿಂದ 55 ವರ್ಷಗಳ ಒಳಗಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸದ ದೃಢೀಕರಣ ಪತ್ರ ಮತ್ತು ಪಡಿತರ ಚೀಟಿಯನ್ನು ಹೊಂದಿರಬೇಕು. ನಿಗಮದ ಇತರ ಯೋಜನೆಯಡಿಗಳಲ್ಲಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ನಿಗಮದಿಂದ ಈಗಾಗಲೇ ಸಾಲ ಸೌಲಭ್ಯ ಪಡೆದಿರಬಾರದು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು. ಅರ್ಜಿದಾರರು ಐಎಫ್‌ಎಸ್‌ಸಿ ಕೋಡ್ ಹೊಂದಿರುವ ಬ್ಯಾಂಕ್‌ಗಳಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು. 

ಆಸಕ್ತರು www.kccdonline.karnataka.gov.in  ಮೂಲಕ ಸೆ.30 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರವರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗದ ರಸ್ತೆ, ಅಚ್ಯುತರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ , ದೂ.ಸಂ: 08182-228262 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor