ಟಾಕ್ಸಿಕ್ ಸಿನಿಮಾ ವಿರುದ್ಧ ಸಾಗರದಲ್ಲಿ ಕರವೇ ಬೃಹತ್ ಪ್ರತಿಭಟನೆ ?

ಹಂಚಿಕೊಳ್ಳಿ
WhatsApp Facebook X Telegram
Karave Protests ಟಾಕ್ಸಿಕ್__ ಸಿನಿಮಾದ ವಿರುದ್ದ ಕರವೇ ಪ್ರತಿಭಟನೆ
Karave Protests ಟಾಕ್ಸಿಕ್__ ಸಿನಿಮಾದ ವಿರುದ್ದ ಕರವೇ ಪ್ರತಿಭಟನೆ

ಮಲೆನಾಡು ಟುಡೆ ಸುದ್ದಿ/ ಸಾಗರ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಸಾಗರದ ಶ್ರೀ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿರುವ ಸಿನಿಮಾದ ಕೆಲವು ಅಶ್ಲೀಲ ತುಣುಕುಗಳನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಾಗರ ಘಟಕದ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಗಿದೆ.

ಸಿನಿಮಾದಲ್ಲಿನ ಕೆಲವೊಂದು ದೃಶ್ಯಗಳು ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುವಂತಿವೆ ಹಾಗೂ ಇವು ಕುಟುಂಬ ಸಮೇತ ಕುಳಿತು ವೀಕ್ಷಿಸಲು ಯೋಗ್ಯವಾಗಿಲ್ಲ ಎಂದು ಪ್ರತಿಭಟನಾಕಾರರು ತೀ ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕರಿಗೆ ಮುಜುಗರ ಉಂಟುಮಾಡುವ ಮತ್ತು ಯುವ ಪೀಳಿಗೆ ಹಾಗೂ ಮಕ್ಕಳ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ವಿವಾದಿತ ದೃಶ್ಯಗಳನ್ನು ಪ್ರದರ್ಶನದಿಂದ ತಕ್ಷಣವೇ ಕತ್ತರಿಸಬೇಕು ಎಂದು ಕರವೇ ಕಾರ್ಯಕರ್ತರು ಥಿಯೇಟರ್ ಮಾಲೀಕರಿಗೆ  ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ ಚಿತ್ರದ ಟೀಸರ್ ಹಾಗೂ ಟ್ರೈಲರ್ ಬಿಡುಗಡೆಯಾದ ಸಮಯದಲ್ಲೂ ಸಹ ಅದರಲ್ಲಿನ ಕೆಲವು ದೃಶ್ಯಗಳ ವಿರುದ್ಧ ರಾಜ್ಯ ಮಹಿಳಾ ಆಯೋಗ ಹಾಗೂ ಸೆನ್ಸಾರ್ ಮಂಡಳಿಗೆ ದೂರುಗಳು ಸಲ್ಲಿಕೆಯಾಗಿದ್ದವು. ಇದರ ನಡುವೆ ಟಾಕ್ಸಿಕ್​ ಸಿನಿಮಾದಲ್ಲಿ ಅನಾವಶ್ಯಕ ದೃಶ್ಯಗಳನ್ನು ಕತ್ತರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕರವೆ ಎಚ್ಚರಿಕೆ ನೀಡಿದೆ. 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor