ಸೆ.4ರಂದು ಶಿವಮೊಗ್ಗ ಇಸ್ಕಾನ್‌ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ; ದಿನವಿಡೀ ವಿಶೇಷ ಕಾರ್ಯಕ್ರಮ

ಹಂಚಿಕೊಳ್ಳಿ
WhatsApp Facebook X Telegram
Sri Krishna Janmashtami Celebration at Bidare ISKCON on September 4
Sri Krishna Janmashtami Celebration at Bidare ISKCON on September 4Sri Krishna Janmashtami Celebration at Bidare ISKCON on September 4

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ತಾಲೂಕಿನ ಬಿದರೆಯಲ್ಲಿರುವ ಇಸ್ಕಾನ್ (shivamogga ISKCON) ದಕ್ಷಿಣ ಶ್ರೀ ಮಾಯಾಪುರ್ ಧಾಮ್‌ನಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಇಸ್ಕಾನ್ ಕರ್ನಾಟಕ ಪ್ರಾದೇಶಿಕ ಕಾರ್ಯದರ್ಶಿ ಸುಧೀರ್ ಚೈತನ್ಯ ದಾಸ್ ತಿಳಿಸಿದರು. ಈ ಸಂಬಂಧ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ವಿವರವಾದ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಇಸ್ಕಾನ್ ಶಾಖೆ ಆರಂಭವಾದಾಗಿನಿಂದ ಪ್ರತಿವರ್ಷವೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜನ್ಮಾಷ್ಟಮಿ ಆಯೋಜಿಸಲಾಗಿದೆ ಎಂದರು.

  1. ಸೆಪ್ಟೆಂಬರ್ 4ರಂದು ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಭಕ್ತರಿಗೆ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೇ ಅವಧಿಯಲ್ಲಿ ಆಗಮಿಸುವ ಭಕ್ತರಿಗೆ ಮಹಾಪ್ರಸಾದ ವಿತರಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
  2. ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಹರಿನಾಮ ಸಂಕೀರ್ತನೆ, ಸಾಂಸ್ಕೃತಿಕ ಕಾರ್ಯಕ್ರಮ, ಮಹಾಭಿಷೇಕ, ಪ್ರವಚನ ಹಾಗೂ ತೊಟ್ಟಿಲೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
  3. ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗುವಂತೆ ಸುಧೀರ್ ಚೈತನ್ಯ ದಾಸ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರಸದಾಸ್ ಗೋಪಾಲದಾಸ್, ರಸಿಕ ಶೇಖರ ಚೈತನ್ಯದಾಸ್, ವಿಶ್ವಂಭರ ಗೌರಾಂಗದಾಸ್ ಮತ್ತಿತರರು ಉಪಸ್ಥಿತರಿದ್ದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor