ಇವತ್ತು ಹಲವು ಬಡಾವಣೆ, ಗ್ರಾಮಗಳಲ್ಲಿ ಕರೆಂಟ್​ ಇರಲ್ಲ ; ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಪವರ್ ಕಟ್!

ಹಂಚಿಕೊಳ್ಳಿ
WhatsApp Facebook X Telegram
power cut ai image
MESCOM Lineman Electrocuted in Shikaripura

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಮೆಸ್ಕಾಂ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಾಗೂ ಶಿವಮೊಗ್ಗ ಎಂಆರ್‌ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು, ಸೆಪ್ಟೆಂಬರ್ 7ರಂದು ಭದ್ರಾವತಿ ನಗರದ (Power Cut in Bhadravati Today) ವಿವಿಧ ಬಡಾವಣೆ ಮತ್ತು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ಪವರ್​ ಕಟ್!?

ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಹೊಸೂರು, ಹುಣಸೇಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಮಾವಿನಕೆರೆ, ದೊಡ್ಡರಿ, ಮಜ್ಜಿಗೇನಹಳ್ಳಿ, ಪದ್ಮನಹಳ್ಳಿ, ಲಕ್ಷ್ಮೀಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರಗುಂಡಿ, ಹಳೇಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ಹಿರಿಯೂರು, ಹೊಸ ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ನಂಜಾಪುರ, ಸಿದ್ದರಹಳ್ಳಿ, ಗೊಂದಿ, ಬಿಸಿಲುಮನೆ, ದೇವರನರಸೀಪುರ, ಶಿವಪುರ, ತಾರೀಕಟ್ಟೆ, ಬಿಳಿಕಿ, ಹೊಳೆ ಗಂಗೂರು, ಸಿರಿಯೂರು, ವೀರಾಪುರ, ಮತಿ, ಲಕ್ಷ್ಮೀ ಸಾಗರ, ಸುಲ್ತಾನಮಟ್ಟಿ, ಕಾರೇಘಟ್ಟ, ಹಾತಿಕಟ್ಟಿ, ಬಾಳೆಮಾರನಹಳ್ಳಿ, ಕಂಬದಾಳ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ತಿಳಿಸಲಾಗಿದೆ. ನಿರ್ವಹಣಾ ಕಾಮಗಾರಿ ಪೂರ್ಣಗೊಂಡ ನಂತರ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲಾಗುವುದು ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor