Instagramನಲ್ಲಿ ಮಾರಕಾಸ್ತ್ರ ಪ್ರದರ್ಶನದ ವಿಡಿಯೋ! ಯುವಕನ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಕೇಸ್

ಹಂಚಿಕೊಳ್ಳಿ
WhatsApp Facebook X Telegram
ಕೋಟೆ ಪೊಲೀಸ್ ಸ್ಟೇಷನ್ ಶಿವಮೊಗ್ಗ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸಿಟಿಯಲ್ಲಿ ಈಗೀಗ ಇನ್​ಸ್ಟಾಗ್ರಾಮ್​ನಲ್ಲಿ ಅಣ್ಣಂದಿರು, ಅಪ್ಪಂದಿರ ಹವಾ ಜಾಸ್ತಿಯಾಗ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಾರಕಾಸ್ತ್ರವನ್ನ ಪ್ರದರ್ಶಿಸುವ ವಿಡಿಯೋ ಹಾಗೂ ಹಳೆಯ ಫೋಟೋಗಳನ್ನು ಎಡಿಟ್ ಮಾಡಿ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನ ವಿರುದ್ಧ ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 25(1)(a) ಅಡಿ ಪ್ರಕರಣ ದಾಖಲಾಗಿರುವ ಕೇಸಿನ ವಿವರ ಹೀಗಿದೆ, ಲಷ್ಕರ್ ಮೊಹಲ್ಲಾದ್ದು ಎನ್ನಲಾದ ದೃಶ್ಯವೊಂದನ್ನ ಇನ್​ಸ್ಟಾಗ್ರಾಮ್ ಅಕೌಂಟ್ ಒಂದರಲ್ಲಿ ಹರಿಬಿಡಲಾಗಿತ್ತು. ಇದನ್ನ ಕೋಟೆ ಪೊಲೀಸ್ ಠಾಣೆ ಸಿಪಿಸಿ ಕಿಶೋರ್ ನೋಡಿದ್ದಾರೆ. ಅಲ್ಲದೆ ಈ ಕುರಿತಾಗಿ ಸುಮುಟೋ ಕೇಸ್ ಕೊಟ್ಟಿದ್ದಾರೆ. ವಿಡಿಯೋದಲ್ಲಿ ಇರುವ ವ್ಯಕ್ತಿಗಳ ಮೇಲೆ ಅದಾಗಲೇ ಕೇಸ್​ಗಳು ಇದ್ದ ಕಾರಣಕ್ಕಾಗಿ ಸುಮುಟೋ ದೂರು ನೀಡಿದ ಸಿಪಿಸಿ, ಈ ವಿಡಿಯೋದಿಂದಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಬಹುದು ಹಾಗೂ ಮುಂದಿನ ದಿನಗಳಲ್ಲಿ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂಬ ಕಾರಣವನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಪ್ರಕಟಣೆದ ತನಿಖೆ ಮುಂದುವರಿದಿದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor