ಶಿವಮೊಗ್ಗದಲ್ಲಿ 2 ದಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ, ಉಪಮುಖ್ಯಮಂತ್ರಿ ಜಿ ಪರಮೇಶ್ವರ್​​ ಭಾಗಿ ?

ಹಂಚಿಕೊಳ್ಳಿ
WhatsApp Facebook X Telegram
Shivamogga Dasara Sports Unidentified Body Karnataka Pension Scheme
Shivamogga Dasara Sports

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ.10 ಮತ್ತು 11 ರಂದು ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸೆ.10 ರ ಬೆಳಿಗ್ಗೆ 10.30 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ನೆರವೇರಿಸುವರು. ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ, ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರ ಕ್ಷೇತ್ರದ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಉಪಸ್ಥಿತಿ ಇರಲಿದ್ದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು.

 ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಅಪರ ಜಿಲ್ಲಾಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಇತರರು ಪಾಲ್ಗೊಳ್ಳುವರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor