ಸಾಗರದ ಯುವತಿಗೆ ಇನ್‌ಸ್ಟಾಗ್ರಾಮ್​​​ನಿಂದ ಬೆಳ್ತಂಗಡಿಯ ಯುವಕ ಪರಿಚಯ, ದಾಖಲಾಯ್ತು ದೂರು, ಏನಿದು ಸುದ್ದಿ?

ಹಂಚಿಕೊಳ್ಳಿ
WhatsApp Facebook X Telegram
ಸಾಗರ ಸುದ್ದಿ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಯುವತಿಯೊಬ್ಬರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸ್ ಠಾಣೆಯೊಂದರಲ್ಲಿಒ ಪ್ರಕರಣ ದಾಖಲಾಗಿದೆ. 

ಸಂತ್ರಸ್ತೆ ಯುವತಿಗೆ ಇನ್‌ಸ್ಟಾಗ್ರಾಮ್ ಮೂಲಕ ಬೆಳ್ತಂಗಡಿ ತಾಲೂಕಿನ ಗ್ರಾಮವೊಂದರ ಯುವಕನ ಪರಿಚಯವಾಗಿದೆ. ದಿನಕಳೆದಂತೆ ಈ ಪರಿಚಯ ಸಲುಗೆಗೆ ತಿರುಗಿದ್ದು, ಆತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದಾನೆ. ಅಷ್ಟೇ ಅಲ್ಲದೆ, ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿರುವ ಆರೋಪ ಕೇಳಿಬಂದಿದೆ. 

ಇದರ ನಡುವೆ, ಆತ ಯುವತಿಯಿಂದ 1 ಲಕ್ಷ ರೂಪಾಯಿ ನಗದು ಹಾಗೂ 35 ಗ್ರಾಂ ಚಿನ್ನದ ಆಭರಣಗಳನ್ನು ಪಡೆದುಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor