ಶಿವಮೊಗ್ಗ: ಗಣೇಶ ವಿಸರ್ಜನೆಗೆ ಲೈಫ್ ಜ್ಯಾಕೆಟ್ ಕಡ್ಡಾಯ, ತೆಪ್ಪದಲ್ಲಿ 3 ಜನರಿಗಷ್ಟೇ ಅವಕಾಶ! ಡಿಸಿ ಆದೇಶ

ಹಂಚಿಕೊಳ್ಳಿ
WhatsApp Facebook X Telegram
ಗಣೇಶ ವಿಸರ್ಜನೆಯ ಸಾಂಧರ್ಬಿಕ ಚಿತ್ರ
ಗಣೇಶ ವಿಸರ್ಜನೆಯ ಸಾಂಧರ್ಬಿಕ ಚಿತ್ರ

ಮಲೆನಾಡು ಟುಡೆ ಸುದ್ದಿ/  ಶಿವಮೊಗ್ಗ: ಜಿಲ್ಲೆಯಲ್ಲಿ ಮುಂಬರುವ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೊಳೆ, ನದಿ, ಕೆರೆ ಹಾಗೂ ಹಿನ್ನೀರು ಪ್ರದೇಶಗಳಲ್ಲಿ ತೆಪ್ಪದ ಮೂಲಕ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ. ಈ ಹಿಂದೆ ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮುಳುಗಿ 12 ಜನರು ಸಾವನ್ನಪ್ಪಿದ್ದ ದುರಂತ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಅಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಈ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಲಾಗಿದೆ.

ಪ್ರಮುಖ ನಿಯಮಗಳು ಹಾಗೂ ನಿರ್ದೇಶನಗಳು

ತೆಪ್ಪದ ಮೂಲಕ ವಿಸರ್ಜನೆ ಮಾಡುವಾಗ ತೆಪ್ಪದಲ್ಲಿ ಕೇವಲ 2 ರಿಂದ 3 ಜನರಿಗೆ ಮಾತ್ರ ಹೋಗಲು ಅವಕಾಶವಿರುತ್ತದೆ. 

ಲೈಫ್ ಜ್ಯಾಕೆಟ್ ಕಡ್ಡಾಯ: ತೆಪ್ಪದಲ್ಲಿ ತೆರಳುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್ ಜ್ಯಾಕೆಟ್  ಧರಿಸಿರಬೇಕು.ನುರಿತ ಈಜುಗಾರರ ಸಮಕ್ಷಮದಲ್ಲೇ ಗಣಪತಿ ಮೂರ್ತಿ ವಿಸರ್ಜನೆ ಪ್ರಕ್ರಿಯೆಯನ್ನು ನಡೆಸತಕ್ಕದ್ದು. 

ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35 ಮತ್ತು 36ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗಳು ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor