ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಆಯನೂರು ವಿದ್ಯುತ್ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಅಂದರೆ ಸೆಪ್ಟೆಂಬರ್ 10ರಂದು ಆಯನೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮತ್ತೊಂದೆಡೆ ಹೊಸನಗರದ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಗ್ರಾಹಕರ ಅಹವಾಲು ಸ್ವೀಕರಿಸಲು ಇಂದು ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ.
ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಕರೆಂಟ್ ಇರಲ್ಲ
ಆಯನೂರು ವಿದ್ಯುತ್ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಇಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಆಯನೂರು, ಕೋಟೆ, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ಚಿಕ್ಕಮತ್ತಲಿ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಆನೆಸರ, ಚನ್ನಹಳ್ಳಿ, ಇಟ್ಟಿಗೆಹಳ್ಳಿ, ಆಡಿನಕೊಟ್ಟಿಗೆ, ಆಡಗಡಿ, ಚಿನ್ಮನೆ, ದ್ಯಾವಿನಕೆರೆ, ರಾಗಿಹೊಸಳ್ಳಿ, ಶರಾವತಿ ಕಾಲೊನಿ, ಘಾಟಿತವರು, ಕೆಸುವಿನಹೊಂಡ, ಚಿಲುಮೆಜಡ್ಡು, ಬುತ್ತಿಹಳ್ಳ, ಕಲ್ಲುಕೊಪ್ಪ, ವೀರಗಾರನರನಕೊಪ್ಪ, ಕಲ್ಗಣಿ, ಕುರಂಬಳ್ಳಿ, ಡಗಲಿಮನೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಗ್ರಾಹಕರು ಸಹಕರಿಸುವಂತೆ ಸಂಬಂಧಪಟ್ಟವರು ಕೋರಿದ್ದಾರೆ.
ಹೊಸನಗರದಲ್ಲಿ ಇಂದು ಜನ ಸಂಪರ್ಕ ಸಭೆ
ಹೊಸನಗರದ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಇಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ವ್ಯಾಪ್ತಿಯ ಗ್ರಾಹಕರಿಂದ ವಿದ್ಯುತ್ ಪೂರೈಕೆ ಮತ್ತು ಸೇವೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಗ್ರಾಹಕರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಈ ಸಭೆಯನ್ನು ಸದುಪಯೋಗಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448289517 ಅನ್ನು ಸಂಪರ್ಕಿಸುವಂತೆ ಅಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ಕೋರಿದ್ದಾರೆ
