ಮಲೆನಾಡು ಟುಡೆ ಸುದ್ದ / ಶಿವಮೊಗ್ಗ : ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಶಿವಮೊಗ್ಗ ವತಿಯಿಂದ ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 14 ಸಾಮಾನ್ಯ ವೈದ್ಯಾಧಿಕಾರಿ (ಎಂಬಿಬಿಎಸ್) ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದ ಆಧಾರದ ಮೇಲೆ ಭರ್ತಿ ಮಾಡಲು ನೇರ ಸಂದರ್ಶನ ಕರೆಯಲಾಗಿದೆ.
ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಮತ್ತು ನಿರಂತರ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಮೆರಿಟ್ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಈ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಸಂದರ್ಶನವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿದಿನಾಂಕ: 11/09/2026 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಜನ್ಮದಿನಾಂಕ, ಮೀಸಲಾತಿ ಪ್ರಮಾಣಪತ್ರಗಳು ಸೇರಿದಂತೆ ಎಲ್ಲಾ ಮೂಲ ದಾಖಲೆಗಳು, ಒಂದು ಸೆಟ್ ದೃಢೀಕೃತ ನಕಲು ಪ್ರತಿಗಳು ಮತ್ತು ಇತ್ತೀಚಿನ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕಾಗಿ ವಿನಂತಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 08182-222382 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ತಿಳಿಸಿದ್ದಾರೆ.
