ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಅಣ್ಣಾನಗರ ಚಾನಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ವಿವರ

ಅಣ್ಣಾನಗಲ ಚಾನಲ್ ರಸ್ತೆಯಲ್ಲಿ ಯಾರೋ ಆರೋಪಿಗಳು ಗಾಂಜಾ ಮಾರಾಟಮಾಡುತ್ತಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ವಿಷಯ ತಿಳಿದ ಕೂಡಲೇ ದೊಡ್ಡ ಪೇಟೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಬದಲ್ಲಿ ಆರೋಪಿಗಳಾದ ಅಹಮದ್, ಸೈಯ್ಯದ್ ಅಪ್ಪರ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಾಗೆಯೇ ಅವರಿಂದ70,000 ರೂಪಾಯಿ ಮೌಲ್ಯದ 1 ಕೆಜಿ 420 ಗ್ರಾಂ ತೂಕದ ಮಾದಕ ವಸ್ತು ಗಾಂಜಾ ಮತ್ತು 3,00,000/- ರೂ ಮೌಲ್ಯದ ಕೃತ್ಯಕ್ಕೆ ಬಳಸಿದ ಕಾರು ಹಾಗೆಯೇ .300 ರೂ ನಗದು ಹಣವನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
