ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ನಗರದ ಪ್ರಮುಖ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಕ್ಕಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ, ಅದರಂತೆ ನಿನ್ನೆ ಕೆಎಸ್ ಆರ್ ಟಿಸಿ ಬಸ್ಟ್ಯಾಂಡ್ನಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಯುವತಿಗೆ ಉಪಟಳ ನೀಡುತ್ತಿದ್ದ ಯುವಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ವಿವರ
ನಿನ್ನೆ (ಸೆಪ್ಟೆಂಬರ್ 15) ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಕ್ಕ ಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ, ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ಯುವತಿಯೊಬ್ಬಳ ಜೊತೆ ಅನುಚಿತವಾಗಿ ವರ್ತಿಸಿ ಉಪಟಳ ನೀಡುತ್ತಿರುವುದು ಕಂಡುಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಕ್ಕ ಪಡೆಯ ಸಿಬ್ಬಂದಿಗಳು ಆತನನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ
ಬಳಿಕ ಆರೋಪಿಯನ್ನು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದು, ಆತನ ವಿರುದ್ಧ ಲಘು ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆತನಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಸೂಕ್ತ ಕಾನೂನು ಕ್ರಮ ಜರುಗಿಸಿದ್ದಾರೆ.
