ಭದ್ರಾವತಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; 49 ವರ್ಷದ ವ್ಯಕ್ತಿಗೆ ಕೋರ್ಟ್ ನೀಡಿದ ಶಿಕ್ಷೆ ಏನು ಗೊತ್ತಾ?

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಭದ್ರಾವತಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಘಟನೆಯ ವಿವರ ನೋಡುವುದಾದರೆ, 2024ರಲ್ಲಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 49 ವರ್ಷದ ವ್ಯಕ್ತಿಯೊಬ್ಬ 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆಗಿನ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಕವಿತಾ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಶ್ರೀಧರ್ ಅವರು ವಾದ ಮಂಡಿಸಿದ್ದರು. ಇದೀಗ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ಅವರು ಆರೋಪಿಗೆ 5 ವರ್ಷಗಳ ಕಾರಾಗೃಹ ವಾಸ, 15,000 ರೂ. ದಂಡ ಹಾಗೂ ಸಂತ್ರಸ್ತ ಬಾಲಕಿಗೆ 50,000 ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor