ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗದ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಮೆರವಣಿಗೆಗ ಅದ್ದೂರಿಯಾಗಿ ಆರಂಭಗೊಂಡಿದೆ.
ನಗರದ ಕೋಟೆ ಭೀಮೇಶ್ವರ ದೇವಸ್ಥಾನದಿಂದ ಇವತ್ತು 11.15ರ ಸುಮಾರಿಗೆ ಮಂಗಳವಾದ್ಯಗಳ ಮುಖಾಂತರ ಗಣಪತಿ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಲಾಯಿತು. ಆರಂಭದಲ್ಲೇ ಭಕ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ದೇವಸ್ಥಾನದ ಬಳಿ ಕ್ರೇನ್ ಮೂಲಕ ಗಣಪತಿಗೆ ಬೃಹತ್ ಹೂವಿನ ಹಾರ ಹಾಗೂ ಮೂಸುಂಬೆ ಹಾರ ಹಾಕಿ ಗೌರವ ಸಲ್ಲಿಸಲಾಯಿತು.ಮೆರವಣಿಗೆಯುದ್ದಕ್ಕೂ ಕೇಸರಿ ಮಯ ವಾತಾವರಣ ನಿರ್ಮಾಣವಾಗಿದ್ದು, ಮಂಗಳವಾದ್ಯಗಳ ನಾದದ ನಡುವೆ ರಾಜಬೀದಿ ಉತ್ಸವ ಸಾಗುತ್ತಿದೆ. ಪ್ರಸ್ತುತ ಮೆರವಣಿಗೆಯು ಮಾರಿಕಾಂಬಾ ದೇವಸ್ಥಾನದ ಬಳಿ ತಲುಪಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.
ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು 3,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
