ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇವತ್ತು ಅಂದರೆ ಸೆಪ್ಟೆಂಬರ್ 28ರಂದು ಬೆಳಿಗ್ಗೆ 10 ಗಂಟೆಗೆ ನೇರ ‘ಉದ್ಯೋಗ ಮೇಳ’ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
ಇಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಸಾಗರ ರಸ್ತೆಯ ಪಂಪಾ ನಗರ 2ನೇ ಕ್ರಾಸ್, ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. SSLC, PUC, ITI, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳ ವಯಸ್ಸು 18ರಿಂದ 35 ವರ್ಷದೊಳಗಿರಬೇಕು.
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿಲ್ಲದೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಉದ್ಯೋಗ ಮೇಳಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗವನ್ನು ನೇರವಾಗಿ ಸಂಪರ್ಕಿಸಬಹುದು. ಅಲ್ಲದೆ, ದೂರವಾಣಿ ಸಂಖ್ಯೆ 9380663606ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
