ವಿದ್ಯಾರ್ಥಿ ಸಂಘದ ಪದಗ್ರಹಣ ವೇಳೆ, ಬಾಲ್ಕನಿ ತಡೆಗೋಡೆ ಕುಸಿತ; ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

ಹಂಚಿಕೊಳ್ಳಿ
WhatsApp Facebook X Telegram
Student Dies After Barrier Wall Collapses During College Union Event in Mangaluru
Student Dies After Barrier Wall Collapses During College Union Event in Mangaluru

ಮಲೆನಾಡು ಟುಡೆ ಸುದ್ದಿ / ಮಂಗಳೂರು / ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸಭಾಂಗಣದ ಪ್ಯಾಸೇಜ್‌ನ ತಡೆಗೋಡೆ ಕುಸಿದು ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಬಾಲ್ಕನಿ ತಡೆಗೋಡೆ ಕುಸಿತ ವಿದ್ಯಾರ್ಥಿ ಸಾವು

ಮಂಗಳೂರಿನ ಪಾಂಡೇಶ್ವರ ಎಮ್ಮೆಕರೆಯಲ್ಲಿರುವ ಹಾಲ್‌ನಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಇನ್ನಿತರ ಹುದ್ದೆಗಳಿಗೆ ನಡೆದ ಚುನಾವಣೆಗೆ ಸಂಬಂಧಿಸಿದ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಸಭಾಂಗಣದ ಬಾಲ್ಕನಿಯ ಪ್ಯಾಸೇಜ್‌ನ ತಡೆಗೋಡೆ ಏಕಾಏಕಿ ಕುಸಿದಿದೆ. ತಡೆಗೋಡೆ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಕೆಳಗೆ ನಿಂತಿದ್ದ ಶಮ್ಹಾಸ್ ಗಾಯಗೊಂಡಿದ್ದಾರೆ. ಈ ದೃಶ್ಯ ಅಲ್ಲಿದ್ದವರ ಮೊಬೈಲ್​ನಲ್ಲಿಯು ರೆಕಾರ್ಡ್ ಆಗಿದೆ. ಇನ್ನೂ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಮ್ಹಾಸ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor