ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಸಾಧ್ಯತೆ ಪರಿಶೀಲನೆಗೆ ಸಮಿತಿ; ಶಿವಮೊಗ್ಗ ಸೇರಿ 7 ಜಿಲ್ಲೆಗಳಲ್ಲಿ ಸಮಾಲೋಚನೆ

ಹಂಚಿಕೊಳ್ಳಿ
WhatsApp Facebook X Telegram
Bengaluru High Court Sharavathi Pumped Storage Project Legal Issue
Bengaluru High Court Sharavathi Pumped Storage Project Legal Issue

ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ರಾಜ್ಯದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವ ಸಾಧ್ಯತೆಗಳನ್ನು ಪರಿಶೀಲಿಸಲು ಮೂವರು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶದಂತೆ ಈ ಸಮಿತಿ ರಚನೆಯಾಗಿದ್ದು, ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಈ ಸಂಬಂಧ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಅವರು ಮಂಗಳವಾರ ಅಧಿಸೂಚನೆ ಹೊರಡಿಸಿದ್ದಾರೆ.

ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯ ಸಂಭಾವ್ಯತೆ ಕುರಿತು ಸಮಿತಿ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ. ಈ ಜಿಲ್ಲೆಗಳ ವಕೀಲರ ಸಂಘಗಳು, ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಗಳನ್ನು ಪಡೆದು ಸಮಿತಿ ವರದಿ ಸಿದ್ಧಪಡಿಸಲಿದೆ. ಬಳಿಕ ಸಂಚಾರಿ ಪೀಠ ಸ್ಥಾಪನೆಯ ಸಾಧ್ಯತೆಗಳಿಗೆ ಸಂಬಂಧಿಸಿದ ವರದಿಯನ್ನು ಸಲ್ಲಿಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor