ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಾಗರ ರಸ್ತೆಯಲ್ಲಿರುವ ಫ್ಲೈಓವರ್ ಬಳಿ ನಡೆದಿದೆ.
ಸಾಗರ ರಸ್ತೆಯ ಫ್ಲೈ ಓವರ್ನ ಬಳಿ ಬೈಕ್ ಸವಾರರು ಬಸ್ಸೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನೆಯ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಈ ಅಪಘಾತದ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
